ಕರಾವಳಿ

ಆಗಸ್ಟ್ 28: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Pinterest LinkedIn Tumblr

sports_star_studim

ಮ೦ಗಳೂರು, ಆಗಸ್ಟ್ 19 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2016-17 ನೇ ಸಾಲಿನ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆಗಸ್ಟ್ 28 ರಂದು ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್, ಮಂಗಳೂರು, ಹಾಗೂ ಮಹಾನಗರಪಾಲಿಕೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್- ಪುರುಷರಿಗೆ 100 ಮೀ, 200 ಮೀ, 400 ಮೀ,800 ಮೀ, 1500 ಮೀ, 5000 ಮೀ, ಎತ್ತರ ಜಿಗಿತ, ಉದ್ದ ಜಿಗಿತ, ಗುಂಡು ಎಸೆತ,ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಚಕ್ರ ಎಸೆತ, 110ಮೀ ಹರ್ಡಲ್ಸ್, 4*400ಮೀ ರಿಲೇ ಮತ್ತು ಮಹಿಳೆಯರಿಗೆ – 100ಮೀ, 200 ಮೀ, 800 ಮೀ, 1500ಮೀ, 3000 ಮೀ, ಎತ್ತರ ಜಿಗಿತ, ಉದ್ದ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಚಕ್ರ ಎಸೆತ, 100 ಮೀ ಹರ್ಡಲ್ಸ್, 4*100ಮೀ ರಿಲೇ,4*400 ಮೀ ರಿಲೇ, ವಾಲಿಬಾಲ್, ಕಬಡ್ಡಿ, ಖೋ ಖೋ, ಬ್ಯಾಡ್ಮಿಂಟನ್ ಮತ್ತು ಥ್ರೋಬಾಲ್, ಫುಟ್ಬಾಲ್ ಕ್ರೀಡೆಗಳನ್ನು ನಡೆಸಲಾಗುವುದು. ಆಸಕ್ತರು ಆಗಸ್ಟ್ 28ರಂದು ಬೆಳಿಗ್ಗೆ 9 ಕ್ಕೆ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಹಾಜರಿರಬೇಕು.

ಈಜು, ಶಟಲ್ ಬ್ಯಾಡ್ಮಿಂಟನ್, ಹ್ಯಾಂಡ್‌ಬಾಲ್, ಹಾಕಿ, ಬಾಸ್ಕೆಟ್ ಬಾಲ್, ಟೆನ್ನಿಸ್, ನೆಟ್ಬಾಲ್ ಹಾಗೂ ಟೇಬಲ್ ಟೆನ್ನಿಸ್ ಕ್ರೀಡೆಗಳನ್ನು ಪುರುಷರಿಗೆ ಮತ್ತು ಮಹಿಳೆಯರಿಗೆ ನೇರವಾಗಿ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ಮಂಗಳೂರು ತಾಲೂಕು, ದ.ಕ.ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Comments are closed.