ಕರಾವಳಿ

ಕಲ್ಕೂರ ಪ್ರತಿಷ್ಠಾನ :ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ ಪ್ರದಾನ

Pinterest LinkedIn Tumblr

kalkura_samaga-prasasti

ಮಂಗಳೂರು : ಕಲ್ಕೂರ ಪ್ರತಿಷ್ಠಾನದ ವತಿಯಿಂದ ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ 2016ನ್ನು ಪಟ್ಲಗುತ್ತು ಮಹಾಬಲ ಶೆಟ್ಟಿಯವರಿಗೆ ಶಾರದಾವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ವೇದಮೂರ್ತಿ ಕಮಲಾದೇವಿ ಆಸ್ರಣ್ಣ ಪ್ರಶಸ್ತಿ ಪ್ರದಾನಗೈದರು. ಪ್ರೊ. ಜಿ.ಆರ್. ರೈ ಕಾರ್ಯಕ್ರಮ ಉದ್ಘಾಟಿಸಿದರು. ವಿವಿಧ ಕಲಾ ಪ್ರಕಾರಗಳಲ್ಲಿ ಮಿಂಚಿದ ಬಾಲ ಪ್ರತಿಭೆ ಶ್ರೇಯಾ ದಾಸ್ ಅವರಿಗೆ ‘ಕಲ್ಕೂರ ಬಾಲಸಿರಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್, ಯಕ್ಷಗಾನ ಅಕಾಡಮಿಯ ಮಾಜಿ ಅಧ್ಯಕ್ಷ ಎಂ.ಎಲ್. ಸಾಮಗ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಶಾರದಾ ವಿದ್ಯಾಲಯದ ಉಪಾಧ್ಯಕ್ಷ ಕೆ.ಎಸ್. ಕಲ್ಲೂರಾಯ, ಪೊಳಲಿ ನಿತ್ಯಾನಂದ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

ಜಿ.ಕೆ. ಭಟ್ ಸೇರಾಜೆ ಅವರು ಮಹಾಬಲ ಶೆಟ್ಟಿ ಅವರ ಬಗ್ಗೆ ಅಭಿನಂದನ ಮಾತುಗಳನ್ನಾಡಿದರು.ಆನಂದ್ ಕೆ. ಸ್ವಾಗತಿಸಿದರು, ಕದ್ರಿ ನವನೀತ್ ಶೆಟ್ಟಿ ಹಾಗೂ ಸುಧಾಕರ್ ಪೇಜಾವರ್ ನಿರೂಪಿಸಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ‘ಪುಣ್ಯ ಸಂದೇಶ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು.

Comments are closed.