
ಕುಂದಾಪುರ: ಕುಂದಾಪುರ-ಕಾರವಾರ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಲುವಾಗಿ ತ್ರಾಸಿ ಸಮೀಪದ ಮರವಂತೆಯ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಗೆ ಸರಕಾರಿ ಬಸ್ಸು ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿದ್ದು ಅವರ ಪೈಕಿ ಓರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.












ಘಟನೆ ವಿವರ: ಗದಗದಿಂದ ಮಂಗಳೂರು ಕಡೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಸೋಮವಾರ ತಡರಾತ್ರಿ 2.30ರ ಸುಮಾರಿಗೆ ಮರವಂತೆ ಬಳಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಚಲಕನ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದು ಅಪಘಾತದ ಪರಿಣಾಮ ಬಸ್ ನಲ್ಲಿದ್ದ ೬ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಓರ್ವ ಪ್ರಯಾಣಿಕನಿಗೆ ಗಂಬೀರ ಗಾಯಗಳಾಗಿದೆ. ಅವರನ್ನು ವಿರೇಶ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇತರೇ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಗಂಗೊಳ್ಳಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.