ಕರಾವಳಿ

ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ನಗರ ಆಯ್ಕೆ : ಕೇಂದ್ರ ಸರ್ಕಾರಕ್ಕೆ ಸಂಸದ ನಳಿನ್‌ಕುಮಾರ್ ಅಭಿನಂದನೆ

Pinterest LinkedIn Tumblr

smart-citynalin

ಮಂಗಳೂರು, ಸೆಪ್ಟಂಬರ್, 20 : ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ನಗರವನ್ನು ಆಯ್ಕೆ ಮಾಡಿರುವ ಕೇಂದ್ರ ಸರ್ಕಾರಕ್ಕೆ ಸಂಸದ ನಳಿನ್‌ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಮಾರ್ಟ್ ಸಿಟಿಗೆ ಆಯ್ಕೆಯಾದ ನೂರು ನಗರಗಳಲ್ಲಿ ಮಂಗಳೂರು ನಗರ ಸೇರ್ಪಡೆಯಾಗಿತ್ತು.

ಪ್ರಥಮ ಹಂತದಲ್ಲಿ 20 ನಗರಗಳ ಪೈಕಿ ಮಂಗಳೂರು ಆಯ್ಕೆಯಾಗುವ ನಿರೀಕ್ಷೆ ಇತ್ತು. ಆದರೆ ಪ್ರಸ್ತಾವನೆಯಲ್ಲಿ ಕೆಲವು ನ್ಯೂನತೆ ಇದ್ದ ಕಾರಣ ಸಾಧ್ಯವಾಗಿರಲಿಲ್ಲ.

ಎರಡನೇ ಹಂತದಲ್ಲಿ ಮಂಗಳೂರನ್ನು ಆಯ್ಕೆ ಮಾಡುವ ಬಗ್ಗೆ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಭರವಸೆ ನೀಡಿದ್ದರು. ಇದೀಗ ಮಂಗಳೂರು ನಗರದ ಪ್ರಸ್ತಾವನೆಗೆ ಸ್ಪಂದನೆ ದೊರೆತಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯಿಂದ ನಗರದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಲಿದೆ. ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಹಕರಿಸಬೇಕು. ಕೇಂದ್ರ ಸರ್ಕಾರದ ಈ ದೂರದೃಷ್ಟಿತ್ವದ ಯೋಜನೆಯಿಂದ ಭವಿಷ್ಯದಲ್ಲಿ ಮಂಗಳೂರು ನಗರದ ಸಮಗ್ರ ಚಿತ್ರಣ ಬದಲಾಗಿದೆ ಎಂದು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.