
ಮಂಗಳೂರು: ಜಮ್ಮು ಕಾಶ್ಮೀರದ ಉರಿಯಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಿಂದ ಹುತಾತ್ಮರಾದ ಯೋಧರಿಗೆ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಕದ್ರಿ ಯುದ್ಧ ಸ್ಮಾರಕದ ಬಳಿ ಮಂಗಳವಾರ ಸಂಜೆ ಶೃದ್ಧಾಂಜಲಿ ಸಲ್ಲಿಸಲಾಯಿತು.
ಉಗ್ರರ ಕೃತ್ಯದಿಂದ ಹುತಾತ್ಮರಾದ 18 ವೀರ ಯೋಧರಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಯುದ್ಧ ಸ್ಮಾರಕದ ಮುಂದೆ ಮೊಂಬತ್ತಿ ಬೆಳಗಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

ವಿಧಾನ ಪರಿಷತ್ ವಿಪಕ್ಷ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ, ಮಾಜಿ ಶಾಸಕ ಎನ್ ಯೋಗೀಶ್ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಂಗಳೂರು ನಗರ ವಿಧಾನ ಸಭಾ ಬಿಜೆಪಿ ಸಮಿತಿ ಅಧ್ಯಕ್ಷ ವೇದವ್ಯಾಸ ಕಾಮತ್, ದ.ಕ.ಜಿಲ್ಲಾ ಸೈನಿಕರ ಸಂಘದ ಮಾಜಿ ಅಧ್ಯಕ್ಷ ವಿಕ್ರಂ ದತ್ತ, ಭಗವಾನ್ ಶೆಟ್ಟಿ, ಮನಪಾ ವಿಪಕ್ಷ ನಾಯಕಿ ರೂಪಾ. ಡಿ ಬಂಗೇರ, ಪಕ್ಷದ ಪ್ರಮುಖರಾದ ರವಿಶಂಕರ್ ಮಿಜಾರ್, ಭಾಸ್ಕರಚಂದ್ರ ಶೆಟ್ಟಿ, ಸದಾನಂದ ನಾವರ ರಮೇಶ್ ಕಂಡೆಟ್ಟು ಹಾಗೂ ಪಕ್ಷದ ಮಹಿಳಾ ಘಟಕದ ಕಾರ್ಯಕರ್ತರು ಸೇರಿದಂತೆ ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Comments are closed.