
ಮಂಗಳೂರು, ಸೆ. 22: ಕಾಶ್ಮೀರದ ಉರಿ ಸೇನಾ ನೆಲೆಯಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧರಿಗೆ ಸರ್ವ ಕಾಲೇಜಿನ ವಿದ್ಯಾರ್ಥಿಗಳು ನಗರದ ಕದ್ರಿಯ ಯೋಧರ ಸ್ಮಾರಕದಲ್ಲಿ ಬುಧವಾರ ಸಂಜೆ ಶ್ರದ್ಧಾಂಜಲಿ ಸಲ್ಲಿಸಿದರು.

ಇದಕ್ಕೂ ಮುನ್ನ ವಿದ್ಯಾರ್ಥಿಗಳು ನಗರದಲ್ಲಿ ಮೊಂಬತ್ತಿ ಮೆರವಣೆಗೆ ನಡೆಸಿದರು. ಈ ಮೆರವಣೆಗೆಯಲ್ಲಿ ನೂರಾರು ವಿದ್ಯಾರ್ಥಿಗಳ ಪಾಲ್ಗೊಂಡಿದ್ದರು. ಬಳಿಕ ಕದ್ರಿ ಸ್ಮಾರಕ ಭವನಕ್ಕೆ ಆಗಮಸಿದ ವಿದ್ಯಾರ್ಥಿಗಳು ಮೇಣದ ಬತ್ತಿ ಹಚ್ಚಿ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಬಳಿಕ ಉಗ್ರರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ತುಳಿದು ನಾಶ ಮಾಡುವ ಮೂಲಕ ಆಕ್ರೋಷ ವ್ಯಕ್ತ ಪಡಿಸಿದರು.
Comments are closed.