
ಮಂಗಳೂರು, ಸೆ.25 : ಸರಕಾರಿ ಸಂಸ್ಥೆಗೊಳಪಟ್ಟ ನರ್ಮ್ ಬಸೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಕ್ಕದ ಗದ್ದೆಗೆ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಹೊರವಲಯ ಉಳಾಯಿಬೆಟ್ಟು ಎಂಬಲ್ಲಿ ನಡೆದಿದ್ದು, ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಣಿಕರಿಲ್ಲದಿದ್ದುದ್ದರಿಂದ ಬಾರೀ ದೊಡ್ಡ ಅನಾಹುತವೊಂದು ತಪ್ಪಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇಂದು ಬೆಳಿಗ್ಗೆ ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ನರ್ಮ್ ಬಸ್ ಉಳಾಯಿಬೆಟ್ಟು ಬಳಿ ಚಾಲಕನ ನಿತ್ಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಗದ್ದೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಬಸ್ಸಿನಲ್ಲಿ ಆರು ಮಂದಿ ಮಾತ್ರ ಪ್ರಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಸಾಮಾನ್ಯವಾಗಿ ಶಾಲಾ ದಿನಗಳಲ್ಲಿ ಈ ಬಸ್ಸಿನಲ್ಲಿ ಈ ಸಮಯದ ಟ್ರಿಪ್ ನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿರುತ್ತಿತ್ತು. ಆದರೆ ಇಂದು ರವಿವಾರ ರಜಾ ದಿನವಾದ ಕಾರಣ ಬಸ್ಸಿನಲ್ಲಿ ಹೆಚ್ಚು ಪ್ರಯಾಣಿಕರು ಇಲ್ಲದೇ ಇದ್ದುದ್ದರಿಂದ ಸಂಭವಿಸ ಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದೆ.
Comments are closed.