ಕರಾವಳಿ

ಪಾಕ್ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ : ಕರಾವಳಿಯಾದ್ಯಂತ ಸಂಭ್ರಮಾಚರಣೆ

Pinterest LinkedIn Tumblr

pak_against_vijayotsava_1

ಮಂಗಳೂರು : ಉರಿ ಸೇನಾ ನೆಲೆಯ ಮೇಲೆ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ರಾಜತಾಂತ್ರಿಕ ನಿರ್ಣಯಗಳೊಂದಿಗೆ ಗಡಿಯಾಚೆಗಿನ ಭಯೋತ್ಪಾದಕ ನೆಲೆಗಳಿಗೆ ನುಗ್ಗಿ ಭಯೋತ್ಪಾದಕರನ್ನು ಸದೆ ಬಡಿದಿರುವ ಭಾರತೀಯ ಸೇನೆಯ ಕ್ರಮಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದ್ದು, ಗುರುವಾರ ಸಂಜೆ ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಲಾಯಿತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಭಾರತದ ಸೇನಾಪಡೆಯು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಕಾರ್ಯಾಚರಣೆಗೆ ಕರಾವಳಿಯಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ ವಿವಿಧೆಡೆ ಬಿಜೆಪಿ,ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಸಹಿತ ಸಾರ್ವಜನಿಕರು ಪಟಾಕಿ ಸಿಡಿಸಿ ಹರ್ಷಾಚರಣೆ ನಡೆಸಿದರು. ಈ ಸಂಭ್ರಮಾಚರಣೆ ರಾತ್ರಿವರೆಗೂ ಮುಂದುವರಿಯಿತು. ಸಾಮಾಜಿಕ ಜಾಲ ತಾಣಗಳಲ್ಲಿ ಈ ಕುರಿತಾದ ಸುದ್ದಿ, ಯೋಧರಿಗೆ ಅಭಿನಂದನೆಗಳ ಮಹಾಪೂರವೇ ಹರಿದಾಡಿತು. ಜೈಹಿಂದ್ ಘೋಷಣೆ, ಹೇಳಿಕೆಗಳು ಎಲ್ಲೆಲ್ಲೂ ಕೇಳಿಸಿತು.

pak_against_vijayotsava_2 pak_against_vijayotsava_3 pak_against_vijayotsava_4 pak_against_vijayotsava_5

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿಗಳನ್ನು ಸದೆ ಬಡಿದ ಭಾರತೀಯ ಸೇನೆಯ ಯೋಧರನ್ನು ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್,ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಮುಖಂಡರಾದ ಜಗದೀಶ್ ಶೇಣವ, ಶರಣ್ ಪಂಪ್‌ವೆಲ್, ಕೆ. ಕೃಷ್ಣಮೂರ್ತಿ ಅವರು ಶ್ಲಾಘಿಸಿದ್ದಾರೆ.

ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದ ಪಾಕಿಸ್ಥಾನಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ಮಾಡಿ ಪಾಕಿಸ್ಥಾನಕ್ಕೆ ದಿಟ್ಟ ಉತ್ತರ ನೀಡಿರುವ ಭಾರತೀಯ ಸೇನೆಯ ಕ್ರಮ ಶ್ಲಾಘನೀಯ ಕ್ಯಾ| ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ. ಯೋಜನಾಬದ್ಧ ಮತ್ತು ವ್ಯವಸ್ಥಿತ ಕಾರ್ಯದ ಮೂಲಕ ದಿಟ್ಟ ನಿರ್ಣಯ ಕೈಗೊಂಡ ಸೇನೆಯ ಅಧಿಕಾರಿಗಳು ಮತ್ತು ಪ್ರಧಾನಿ ಮೋದಿ ಕ್ರಮ ಶ್ಲಾಘನೀಯ ಎಂದು ಕಾರ್ಣಿಕ್ ಕೊಂಡಾಡಿದ್ದಾರೆ.

Comments are closed.