ಕರಾವಳಿ

ಪಣಂಬೂರು ಬೀಚ್‌ನಲ್ಲಿ ನೀರುಪಾಲಾಗಿದ್ದ ಮಗುವಿನ ಮೃತದೇಹ ಪತ್ತೆ

Pinterest LinkedIn Tumblr

panambur_bot-palty_2

ಮಂಗಳೂರು, ಅ. 6: ಪಣಂಬೂರು ಬೀಚ್ ನಲ್ಲಿ ಬುಧವಾರ ತಾಂತ್ರಿಕ ದೋಷಕ್ಕೆ ಒಳಗಾಗಿ ಸ್ಪೀಡ್ ಬೋಟ್ ಮಗುಚಿ ಬಿದ್ದ ಪರಿಣಾಮ ನೀರುಪಾಲಾಗಿದ್ದ ಎರಡುವರೆ ವರ್ಷ ಪ್ರಾಯದ ಮಗುವಿನ ಮೃತದೇಹ ಗುರುವಾರ ಬೆಳಗ್ಗೆ ಪಣಂಬೂರು ಕಡಲಕಿನಾರೆಯಲ್ಲಿ ಪತ್ತೆಯಾಗಿದೆ.

ನಾಟೆಕಲ್ ನಿವಾಸಿ ಸನಾಯಿಲ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಹಮ್ಮದ್ ಶಹದನ್ (2.5) ಬುಧವಾರ ಪಣಂಬೂರು ಬೀಚ್ ನಲ್ಲಿ ಸ್ಪೀಡ್ ಬೋಟ್ ನಿಂದ ಬಿದ್ದು ನೀರುಪಾಲಾಗಿದ್ದ.

panambur_bot-palty_7

ಶಹದನ್ ಸೇರಿದಂತೆ ಕುಟುಂಬದ ಆರು ಮಂದಿ ಸದಸ್ಯರು ಬುಧವಾರ ಪಣಂಬೂರು ಬೀಚ್ಗೆ ಬಂದಿದ್ದು, ಬೀಚ್ನಲ್ಲಿ ಸುತ್ತಾಟ ನಡೆಸಿ ಸ್ಪೀಡ್ ಬೋಟ್ನಲ್ಲೂ ಸುತ್ತಾಟಕ್ಕೆ ತೆರಳಿದ್ದರು. ಸ್ಪೀಡ್ ಬೋಟ್ ತುಸು ದೂರ ತಲುಪುತ್ತಿದ್ದಂತೆ ಬೋಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ನೀರಿನ ತೆರೆಗೆ ಸಿಲುಕಿ ಬೋಟ್ ಮಗುಚಿ ಬಿದ್ದಿತ್ತು. ಆ ಕೂಡಲೇ ಮಗು ನೀರಿನ ಸೆಳೆತಕ್ಕೆ ಸಿಲುಕಿ ಹೋಗಿದ್ದು ಉಳಿದವರು ಲೈಫ್ ಜಾಕೆಟ್ ಧರಿಸಿದ್ದ ಕಾರಣದಿಂದ ಈಜುವ ಪ್ರಯತ್ನ ನಡೆಸಿದ್ದರು. ಕೂಡಲೇ ಲೈಫ್ಗಾರ್ಡ್ ಸಿಬ್ಬಂದಿ ಐವರನ್ನು ರಕ್ಷಿಸಿದ್ದಾರೆ.

ಬೀಚ್ ರಕ್ಷಣಾ ದಳ, ಮುಳುಗು ತಜ್ಞರು ಸಮುದ್ರದಲ್ಲಿ ಮಗುವಿನ ಪತ್ತೆಗೆ ಹುಡುಕಾಟ ನಡೆಸಿದ್ದರು.. ಪಣಂಬೂರು ಎಸಿಪಿ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಂ ಹೂಡಿದ್ದರು. ಶೋಧ ಕಾರ್ಯಾಚರಣೆಯನ್ನು ರಾತ್ರಿ ವೇಳೆಯೂ ಮುಂದುವರೆಸುವಂತೆ ಸಚಿವ ಖಾದರ್ ಸೂಚನೆ ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆದಿದ್ದು, ಇಂದು ಬೆಳಿಗ್ಗೆ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Comments are closed.