ಕರಾವಳಿ

ನವರಾತ್ರಿ ಹಿನ್ನೆಲೆ : ಅ.8ರಿಂದ 17ರವರೆಗೆ ಜಿಲ್ಲೆಯಲ್ಲಿ ಮದ್ಯದಂಗಡಿ ಬಂದ್

Pinterest LinkedIn Tumblr

liquor_ban_pic

ಮ೦ಗಳೂರು,ಅ.07:  ಅಕ್ಟೋಬರ್ 8ರಿಂದ 17ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನವರಾತ್ರಿ ಹಬ್ಬದ ಪ್ರಯುಕ್ತ ನಡೆಯುವ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವೈಭವದ ಶೋಭಾಯಾತ್ರೆ ಇರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷಿಯಿಂದ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್/ ಮಧ್ಯ ಮಾರಾಟ ಕೇಂದ್ರಗಳನ್ನು ದಸರಾ ಮೆರವಣಿಗೆ ನಡೆಯುವ ದಿನದ೦ದು ಮದ್ಯಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಿ ಕರ್ನಾಟಕ ಅಬಕಾರಿ ಕಾಯ್ದೆ 1965ರಡಿ ಕಾರ್ಯಾಚರಿಸುತ್ತಿರುವ ಸನ್ನದು ಆವರಣಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಹಾಗೂ ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ ಆದೇಶ ಹೂರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Comments are closed.