ಕರಾವಳಿ

ಕೇಮಾರು ಸ್ವಾಮೀಜಿ ಹಾಗೂ ರೆ.ಫಾ.ಜಾನ್ ಫೆರ್ನಾಂಡಿಸ್ ಅವರಿಗೆ ‘ಸದ್ಭಾವನಾ ಸಮ್ಮಾನ್’ ಪ್ರಶಸ್ತಿ ಪ್ರದಾನ

Pinterest LinkedIn Tumblr

kemaru_swamiji-sanman_1

ಮಂಗಳೂರು, ಅ. 8: ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಶುಕ್ರವಾರ ಸಂಜೆ ಮಂಗಳೂರಿನ ಪುರಭವನದಲ್ಲಿ ನಡೆದ ‘ಶಾಂತಿ ಮತ್ತು ಮಾನವೀಯತೆ’ ಅಭಿಯಾನ ಕಾರ್ಯಕ್ರಮದಲ್ಲಿ ಕೇಮಾರು ಸಾಂದೀಪನಿ ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಕ್ರೈಸ್ತ ಧರ್ಮ ಅಧ್ಯಯನ ಪೀಠದ ಮಾಜಿ ಅಧ್ಯಕ್ಷ ರೆ.ಫಾ.ಜಾನ್ ಫೆರ್ನಾಂಡಿಸ್ ಅವರಿಗೆ ‘ಸದ್ಭಾವನಾ ಸಮ್ಮಾನ್’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

kemaru_swamiji-sanman_2

‘ಸದ್ಭಾವನಾ ಸಮ್ಮಾನ್’ ಸ್ವೀಕರಿಸಿ ಮಾತನಾಡಿದ ಕೇಮಾರು ಸಾಂದೀಪನಿ ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅವರು, ಸಾಮಾಜಿಕ ಶಾಂತಿ, ಸಹಬಾಳ್ವೆಗೆ ಶ್ರಮಿಸುವ ಜೊತೆಗೆ ಸಮಾಜದ ದುರ್ಬಲ ವರ್ಗದವರಿಗೆ ಸೇವೆ ಮಾಡುವ ಮೂಲಕ ದೇವರನ್ನು ಕಾಣಲು ಸಾಧ್ಯವಿದೆ.

ಹಿಂಸೆಯಿಂದ ಶಾಂತಿ ಸ್ಥಾಪನೆಯಾಗುವುದಿಲ್ಲ ಎಂಬುದನ್ನು ಸಮಾಜ ಅರಿತುಕೊಳ್ಳಬೇಕು.ಪ್ರೀತಿಯ ದೀಪವನ್ನು ಹೊತ್ತಿಸುವ ಮೂಲಕ ಸಮಾಜದಲ್ಲಿ ಸೌಹಾರ್ದ ಮತು ಸಹೋದರತೆಯ ವಾತಾವರಣವನ್ನು ಸೃಷ್ಟಿಸೋಣ.ದ್ವೇಷವೆಂಬ ಬೆಂಕಿಯನ್ನು ನಂದಿಸೋಣ ಎಂದು ಹೇಳಿದರು.

kemaru_swamiji-sanman_3

‘ಸದ್ಭಾವನಾ ಸಮ್ಮಾನ್’ ಸ್ವೀಕರಿಸಿ ಮಾತನಾಡಿದ ರೆ.ಫಾ.ಜಾನ್ ಫೆರ್ನಾಂಡಿಸ್ ಅವರು,ಸಹೋದರತೆ ಮತ್ತು ಸಹಬಾಳ್ವೆಯ ಕೆಲಸದಲ್ಲಿ ಎಲ್ಲರೂ ಕೈಜೋಡಿಸಿದರೆ ಗುರಿ ಮುಟ್ಟಲು ಸಾಧ್ಯವಿದೆ ಎಂದರು.

student_abhiyaana_1 student_abhiyaana_2 student_abhiyaana_3 student_abhiyaana_4 student_abhiyaana_5 student_abhiyaana_6 student_abhiyaana_7 student_abhiyaana_8 student_abhiyaana_9 student_abhiyaana_10

ಯುನಿಟಿ ಅಕಾಡಮಿ ಆಫ್ ಎಜುಕೇಶನ್ನ ಅಧ್ಯಕ್ಷ ಡಾ.ಸಿ.ಪಿ.ಹಬೀಬ್ ರಹ್ಮಾನ್, ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ಇದರ ಅಧ್ಯಕ್ಷ ಮುಹಮ್ಮದ್ ಕುಂಞಿ, ಶಾಂತಿ ಮತ್ತು ಮಾನವೀಯತೆ ಅಭಿಯಾನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಗೂ ಮಂಗಳೂರು ವಿವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಮಲ್ಲಿಪಟ್ಣ, ಉಳ್ಳಾಲ ಸದ್ಭಾವನಾ ವೇದಿಕೆಯ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್, ಉಳ್ಳಾಲ ಮೊಗವೀರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ, ನಗರ ಸಂಶೋಧನಾ ಕೇಂದ್ರದ ಪ್ರೊಜೆಕ್ಟ್ ಕೋ ಆರ್ಡಿನೇಟರ್ ಹರಿಣಿ, ಸ್ವಾಗತ ಸಮಿತಿಯ ಕಾರ್ಯದರ್ಶಿ ಉಮರ್ ಯು.ಎಚ್. ಉಪಸ್ಥಿತರಿದ್ದರು.

Comments are closed.