ಕರಾವಳಿ

ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ : ಪಡೀಲ್- ಕಣ್ಣೂರು ನಿವಾಸಿ ಸ್ಥಳದಲ್ಲೇ ಮೃತ್ಯು

Pinterest LinkedIn Tumblr

axident_manjeshwar_1

ಮಂಜೇಶ್ವರ, ಅ.9: ಮಂಗಳೂರು – ಕಾಸರಗೋಡ್ ರಾಷ್ಟ್ರೀಯ ಹೆದ್ದಾರಿ ಮಂಜೇಶ್ವರ ಸಮೀಪ ನಡೆದ ರಸ್ತೆ ಅಪಘಾತವಂದರಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಇಂದು ಮದ್ಯಾಹ್ನ ಸಂಭವಿಸಿದೆ.

ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯ ಹೆದ್ದಾರಿ ಬಳಿ ರವಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿ ಸಾಗುತಿದ್ದ ಇಬ್ಬರ ಪೈಕಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಅಪಘಾತದಿಂದ ಬೈಕ್ ನಲ್ಲಿದ್ದ ಇನ್ನೋರ್ವರು ಗಂಭೀರ ಗಾಯಗೊಂಡಿದ್ದು, ಇವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ನಲ್ಲಿ ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ನಿವಾಸಿಗಳಾದ ಶಿವಪ್ಪ, ರಾಮಚಂದ್ರನ್ ಎಂಬವರು ಪ್ರಯಾಣಿಸುತ್ತಿದ್ದು, ಇವರಿಬ್ಬರು ಗೃಹ ಪ್ರವೇಶದ ಆಮಂತ್ರಣ ನೀಡಲು ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಈ ಇಬ್ಬರಲ್ಲಿ ಮೃತಪಟ್ಟವರು ಯಾರೆಂದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

ಇವರಿಬ್ಬರು ಪ್ರಯಾಣಿಸುತ್ತಿದ್ದ ಬೈಕಿಗೆ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಚಾಲಕ ಓವರ್ಟೇಕ್ ಮಾಡುವ ಭರದಲ್ಲಿ ಬೈಕಿಗೆ ಢಿಕ್ಕಿ ಹೊಡೆದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿರುವ ಮಂಜೇಶ್ವರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Comments are closed.