ಉಡುಪಿ: ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರನ್ನು ಸಿದ್ದರಾಮಯ್ಯ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಮನ ನೊಂದು ಕಾಂಗ್ರೆಸ್ ತ್ಯಜಿಸಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಶ್ರೀನಿವಾಸ್ ಪ್ರಸಾದ್ ನಿರಂತರ ಸಂರ್ಕದಲ್ಲಿದ್ದಾರೆ. ಅಲ್ಲದೇ ಶೀಘ್ರವೇ ಬಿಜೆಪಿ ಸೇರುವ ವಿಶ್ವಾಸ ಇದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ಮಾಡಿದ ಆರ್. ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾವೇರಿ ನದಿ ನೀರು ವಿವಾದ, ಸರಕಾರದ ಆಡಳಿತ ವೈಫಲ್ಯಕ್ಕೆ ಅನೇಕರು ಅಸಮಾಧಾನಗೊಂಡಿದ್ದಾರೆ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್,ಜೆಡಿಎಸ್ ನ ಅನೇಕ ಮುಖಂಡರು ಬಿಜೆಪಿ ಸೇರಲಿದ್ದು ಎಲ್ಲರೂ ಇದನ್ನು ಕಾದುನೋಡಿರಿ ಎಂದ ಅವರು, ದಲಿತ ಮುಖಂಡ, ನಿವೃತ್ತ ಐಎಎಸ್ ಅಧಿಕಾರಿ ಶಿವರಾಂ ಬಿಜೆಪಿಗೆ ಸೇರ್ಪಡೆಯ ವಿಚಾರ ತಿಳಿದಿದ್ದು ಶೀಘ್ರವೇ ಸೇರಲಿದ್ದಾರೆ ಎಂದರು.
ಶ್ರೀ ಕೃಷ್ಣ ಮಠದಲ್ಲಿ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಅವರ ಜೊತೆ ಆರ್. ಅಶೋಕ್ ದಂಪತಿಗಳು ಮಾತುಕತೆ ನಡೆಸಿದರು. ಈ ಸಂದರ್ಭ ಅಶೋಕ್ ಜೊತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಕೂಡಾ ಸಾಥ್ ನೀಡಿದ್ದರು.
Comments are closed.