ಕರಾವಳಿ

ಮಂಗಳೂರು ; ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Pinterest LinkedIn Tumblr

valmiki_jayanthi_zp_1

ಮಂಗಳೂರು, ಅ.15: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ಶನಿವಾರ ನಗರದ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ. ವಾಲ್ಮಿಕಿ ನಾಯಕ ಅಸೋಸಿಯೇಶನ್ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

valmiki_jayanthi_zp_2 valmiki_jayanthi_zp_3 valmiki_jayanthi_zp_4 valmiki_jayanthi_zp_5

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಕೆ‌. ಮೀನಾಕ್ಷಿ ಭಾಗವಹಿಸಿದ್ದರು.

valmiki_jayanthi_zp_6 valmiki_jayanthi_zp_7 valmiki_jayanthi_zp_8 valmiki_jayanthi_zp_9 valmiki_jayanthi_zp_10

ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಮೊಯ್ದಿನ್ ಬಾವ, ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ದ.ಕ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಮಂಗಳೂರು ಪೊಲೀಸ್ ಕಮಿಷನರ್ ಎಂ. ಚಂದ್ರಶೇಖರ್, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ, ಮನಪಾ ಉಪ ಆಯುಕ್ತ ಗೋಕುಲ್ ದಾಸ್ ನಾಯಕ್, ಜಿ.ಪಂ ಉಪ ಕಾರ್ಯದರ್ಶಿ ಉಮೇಶ್, ದ.ಕ ಜಿಲ್ಲಾ ವಾಲ್ಮೀಕಿ ನಾಯಕ ಅಸೋಸಿಯೇಷನ್ ಅಧ್ಯಕ್ಷ ಹಾಲೇಶಪ್ಪ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಡಾ. ಬಿ.ಎಸ್ ಹೇಮಲತಾ, ಜಿ.ಪಂ ಸದಸ್ಯ ಶಾಹುಲ್ ಹಮೀದ್ ಮುಂತಾದವರು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.

Comments are closed.