ಮಂಗಳೂರು, ಅ.15: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಕರಾವಳಿ ಜಿಲ್ಲೆಗಳಲ್ಲಿ ಪಕ್ಷ ಪುನಶ್ಚೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಈ ಸಂದರ್ಭ ಅವರು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಹಾಗೂ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಈ ವೇಳೆ ಶಾಸಕ ಮಧು ಬಂಗಾರಪ್ಪ, ರಾಷ್ಟ್ರೀಯ ಕಾರ್ಯದರ್ಶಿ ಜಾಫ್ರುಲ್ಲಾ ಖಾನ್, ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮದ್ ಕುಂಞಿ, ಮುಖಂಡರಾದ ಸದಾಶಿವ ಉಳ್ಳಾಲ್, ವಸಂತ ಪೂಜಾರಿ, ರಮೀಝಾ ಬಾನು, ಅಝೀಝ್ ಕುದ್ರೋಳಿ ಹಾಗೂ ಪಕ್ಷದ ಇತರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹೆಚ್ಚಿನ ವಿವರ ನಿರೀಕ್ಷಿಸಿ…