ಕರಾವಳಿ

ರುದ್ರೇಶ್‌ ಹತ್ಯೆ ಆರೋಪಿಗಳ ಬಂಧನಕ್ಕೆ ಬಿಜೆಪಿ ಆಗ್ರಹ : ವಿಳಂಭವಾದರೆ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಯ ಎಚ್ಚರಿಕೆ

Pinterest LinkedIn Tumblr

bjp_protest_rudresh_1

ಮಂಗಳೂರು: ಇತ್ತೀಚಿಗೆ ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಆರ್‌ಎಸ್‌ಎಸ್‌ ಕಾರ್ಯಕರ್ತ ಆರ್‌.ರುದ್ರೇಶ್‌ ಹತ್ಯೆ ಆರೋಪಿಗಳನ್ನು ಈ ಕೂಡಲೇ ಬಂಧಿಸ ಬೇಕೆಂದು ಆಗ್ರಹಿಸಿ ಬಿಜೆಪಿ ದ.ಕ. ಜಿಲ್ಲಾ ಘಟಕದ ವತಿಯಿಂದ ಬುಧವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು, ಆರ್‌ಎಸ್‌ಎಸ್‌ ಕಾರ್ಯಕರ್ತ ಆರ್‌. ರುದ್ರೇಶ್‌ ಹತ್ಯೆ ಪ್ರಕರಣದ ಆರೋಪಿಗಳನ್ನು ವಾರದೊಳಗೆ ಬಂಧಿಸಿ ಸೂಕ್ತ ಶಿಕ್ಷೆ ನೀಡಬೇಕು. ಆರೋಪಿಗಳನ್ನು ಬಂಧಿಸುವಲ್ಲಿ ಸರಕಾರ ನಿರ್ಲಕ್ಷ್ಯ ತೋರದೆ ಶೀಘ್ರ ಕಾರ್ಯೋನ್ಮುಖವಾಗಬೇಕು. ಇಲ್ಲವಾದಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

bjp_protest_rudresh_2

ರಾಜಧಾನಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಘಟಕದ ಕಾರ್ಯದರ್ಶಿ, ಸ್ಥಳೀಯ ಆರ್.ಎಸ್.ಎಸ್‌ನ ಸ್ವಯಂ ಸೇವಕ ರುದ್ರೇಶ್ ಅವರನ್ನು ಹಾಡುಹಗಲೇ ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆಗೈದಿರುವ ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ ಮತ್ತು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಸ್ಥಿತ್ವಕ್ಕೆ ಬಂದ ನಂತರ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದೆಗೆಟ್ಟಿದೆ, ಎಂಬುದನ್ನು ತೋರಿಸುತ್ತದೆ.

ಈ ಹಿಂದೆ ಗೋ ಹಂತಕನ ಹತ್ಯೆಯಾದಾಗ ಆತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದ ಸಿದ್ದರಾಮಯ್ಯನವರಿಗೆ ಪ್ರಶಾಂತ್‌ ಪೂಜಾರಿ, ಕೊಡಗಿನ ಕುಟ್ಟಪ್ಪ, ಮೈಸೂರಿನ ರಾಜು ಹತ್ಯೆಯಂತಹ ಘಟನೆಗಳಲ್ಲಿ ಕನಿಷ್ಠ ಪಕ್ಷ ನೊಂದ ಕುಟುಂಬಕ್ಕೆ ಸಾಂತ್ವನ ಹೇಳುವ ಸೌಜನ್ಯವೂ ಬರಲಿಲ್ಲ. ಉಗ್ರವಾದಕ್ಕೆ ಬೆಂಬಲ ನೀಡುವ ಸರಕಾರ ಇದಾಗಿದೆ ಎಂದು ನಳಿನ್‌ ಕುಮಾರ್‌ ಕಟೀಲು ಆರೋಪಿಸಿದರು.

bjp_protest_rudresh_3 bjp_protest_rudresh_4

ಈ ದುರ್ಘಟನೆ ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗ ಬಾರದು ಮತ್ತು ಜನರು ಶಾಂತಿ, ನೆಮ್ಮದಿಯಿಂದ ಬದುಕಲು ಯಾವುದೇ ಅಡ್ಡಿಯಾಗಬಾರದು. ಒಂದು ವೇಳೆ ರಾಜ್ಯದಲ್ಲಿ ಅಶಾಂತಿ ಉಂಟಾದರೆ ಅದಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಹೇಳಿದ ಅವರು, ರಾಜ್ಯಸರಕಾರ ಮತ್ತು ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ ಈ ಹೋರಾಟ ಉಗ್ರ ರೂಪವನ್ನು ತಳೆಯುತ್ತದೆ ಎಂದು ಹೇಳಿದರು.

ಲಾಲೂ ಪ್ರಸಾದ್‌ ಯಾದವ್‌ ಬಿಹಾರವನ್ನು ಜಂಗಲ್‌ ರಾಜ್ಯ ಮಾಡಿದ ಹಾಗೆ ಕರ್ನಾಟಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಗಲ್‌ ರಾಜ್ಯ ಮಾಡಲು ಹೊರಟಿದ್ದಾರೆ. ಗೋಹಂತಕರು, ಭಯೋತ್ಪಾದಕರಿಗೆ ರಕ್ಷಣೆ ನೀಡಲಾಗುತ್ತಿದೆ. ಆದರೆ ದೇಶಭಕ್ತರನ್ನು ದಮನಿಸಲಾಗುತ್ತಿದೆ ಎಂದು ನಳಿನ್‌ಕುಮಾರ್‌ ಹೇಳಿದರು.

bjp_protest_rudresh_5

ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನಾ ಜಿ.ಕೆ. ಭಟ್‌, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ದ.ಕ. ಜಿ.ಪಂ. ಅಧ್ಯಕ್ಷ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಮುಖಂಡರಾದ ಜಗದೀಶ್‌ ಅಧಿಕಾರಿ, ರವಿಶಂಕರ ಮಿಜಾರು, ಸತೀಶ್‌ ಪ್ರಭು, ಡಾ| ವೈ. ಭರತ್‌ ಶೆಟ್ಟಿ, ಸುದರ್ಶನ ಎಂ., ಬೃಜೇಶ್‌ ಚೌಟ, ರಾಮ ಅಮೀನ್‌ ಪಚ್ಚನಾಡಿ, ಹರೀಶ್‌ ಮೂಡುಶೆಡ್ಡೆ, ಹಿಂಜಾವೆ ಮುಖಂಡ ಸತ್ಯಜಿತ್‌ ಸುರತ್ಕಲ್‌ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

Comments are closed.