ಕರಾವಳಿ

ಕಾಲೇಜು ವಿದ್ಯಾರ್ಥಿಯಿಂದ ಪ್ರಾಂಶುಪಾಲರಿಗೆ ಹಲ್ಲೆ : ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲು

Pinterest LinkedIn Tumblr

milagris_princ_attack

ಮಂಗಳೂರು, ಅ.20: ಕಾಲೇಜು ವಿದ್ಯಾರ್ಥಿಯೋರ್ವ ಕಾಲೇಜಿನ ಪ್ರಾಂಶುಪಾಲರ ಮೇಲೆಯೇ ಹಲ್ಲೆ ನಡೆಸಿದ ಘಟನೆಯೊಂದು ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ನಡೆದಿದ್ದು, ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಾಗಿದೆ.

ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಯಿಂದ ಹಲ್ಲೆಗೊಳಗಾದವರನ್ನು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಫಾ.ಮೈಕಲ್ ಸಾಂತುಮೆಯರ್ ಎಂದು ಹೆಸರಿಸಲಾಗಿದೆ. ಹಲ್ಲೆ ಮಾಡಿದ ಆರೋಪಿ ವಿದ್ಯಾರ್ಥಿಯನ್ನು ಅದೇ ಕಾಲೇಜಿನ ಬಿಬಿಎಂ ವಿದ್ಯಾರ್ಥಿ ಮುಹಮ್ಮದ್ ಶಾಹ್ನವಾಝ್ ಎಂದು ಗುರುತಿಸಲಾಗಿದೆ.

mohammed-shahnawaz_1

ಶಾಹ್ನವಾಝ್ ಕಾಲೇಜಿನಲ್ಲಿ ತರಗತಿಗೆ ನಿರಂತರ ಗೈರು ಹಾಜರಾಗುತ್ತಿದ್ದನೆಂದು ಹೇಳಲಾಗಿದ್ದು, ಈ ಬಗ್ಗೆ ಪ್ರಾಂಶುಪಾಲಕರು ಆತನಿಗೆ ಎಚ್ಚರಿಕೆ ನೀಡಿದ್ದರೆನ್ನಲಾಗಿದೆ. ಇಂದು ಮಧ್ಯಾಹ್ನ ಪ್ರಾಂಶುಪಾಲರು ಊಟಕ್ಕೆ ಹೋದ ಸಂದರ್ಭದಲ್ಲಿ ಶಾಹ್ನವಾಝ್ ಹಠಾತ್ ಬಂದು ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಪ್ರಾಂಶುಪಾಲರು ವಿದ್ಯಾರ್ಥಿ ವಿರುದ್ಧ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ವಿದ್ಯಾರ್ಥಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Comments are closed.