ಕರಾವಳಿ

ದ.ಕ.ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ಸಾಗಾಟ :ಕೊಣಾಜೆ ವ್ಯಾಪ್ತಿಯಲ್ಲಿ ಮೂರು ಲಾರಿಗಳ ವಶ

Pinterest LinkedIn Tumblr

sand_lory_arrest

ಕೊಣಾಜೆ, ಅ.21: ಸರಕಾರ ಹಾಗೂ ಜಿಲ್ಲಾಡಳಿತ ಅಕ್ರಮ ಮರಳುಗಾರಿಕೆ ವಿರುದ್ಧ ಯಾವೂದೇ ರೀತಿಯ ಕಾನೂನನ್ನು ಜಾರಿಗೆ ತಂದರೂ, ದ.ಕ.ಜಿಲ್ಲೆಯಲ್ಲಿ ಮಾತ್ರ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದೇ ಹೇಳ ಬಹುದು.

ದಿನಾನಿತ್ಯ ಒಂದಲ್ಲ ಒಂದು ಅಕ್ರಮ ಮರಳು ಸಾಗಾಟ ಪ್ರಕರಣಗಳು ನಡೆಯುತ್ತಲೇ ಇದೆ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ನೀಡುತ್ತಲ್ಲೇ ಇದ್ದಾರೆ.

ಇಂದು ಕೂಡ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಗಳನ್ನು ಕಂದಾಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡ ಘಟನೆ ದೇರಳಕಟ್ಟೆ ಮತ್ತು ಕೊಣಾಜೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಮಂಗಳೂರು ಎಸಿ ಡಾ.ಅಶೋಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯೊಂದರಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಲಾರಿಗಳನ್ನು ದೇರಳಕಟ್ಟೆ ಮತ್ತು ಕೊಣಾಜೆಯಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಇದೀಗ ಲಾರಿ ಮತ್ತು ಮರಳನ್ನು ಸಂಬಂಧ ಪಟ್ಟ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Comments are closed.