ಕರಾವಳಿ

ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರಿನಲ್ಲಿ ಭಾವೈಕ್ಯತಾ ಸಂಗಮ’

Pinterest LinkedIn Tumblr

ivan_diwali_photo_1

ಮಂಗಳೂರು, ಅ. 30: ದೀಪಾವಳಿ ಹಬ್ಬದ ಪ್ರಯುಕ್ತ ಶನಿವಾರ ನಗರದ ಕದ್ರಿಯ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ‘ಭಾವೈಕ್ಯತಾ ಸಂಗಮ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕದ್ರಿ ಮಠದ ಪ್ರತಿನಿಧಿಯಾಗಿ ಭಾಗವಹಿಸಿದ ಸಂದೀಪ್ನಾಥ ಜೀ ಮತ್ತು ಪಾಲಕ್ನಾಥ ಜೀ ಅವರು ಎಲ್ಲರಿಗೂ ದೀಪಾವಳಿ ಹಬ್ಬದ ಶುಭ ಕೋರಿದರು. ಸೆಮಿನಾರ್ ಚರ್ಚ್ ನ ಧರ್ಮಗುರು ಫಾ.ಸೆಬೆಸ್ಟಿಯನ್, ಇಮಾಮ್ ಕೌನ್ಸಿಲ್ನ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ, ಶಾಸಕ ಜೆ.ಆರ್.ಲೋಬೊ ದೀಪಾವಳಿ ಹಬ್ಬಕ್ಕೆ ಶುಭಾ ಕೋರಿದರು.

ivan_diwali_photo_2 ivan_diwali_photo_3 ivan_diwali_photo_4 ivan_diwali_photo_5 ivan_diwali_photo_6 ivan_diwali_photo_7 ivan_diwali_photo_8 ivan_diwali_photo_9 ivan_diwali_photo_10 ivan_diwali_photo_11 ivan_diwali_photo_12 ivan_diwali_photo_13

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ, ಶಾಸಕಿ ಶಕುಂತಲಾ ಶೆಟ್ಟಿ, ಮೇಯರ್ ಹರಿನಾಥ್, ಕಾರ್ಪೊರೇಟರ್ಗಳಾದ ಪ್ರತಿಭಾ ಕುಳಾಯಿ, ಶಶಿಧರ್ ಹೆಗ್ಡೆ, ಅಪ್ಪಿ, ಜೆಸಿಂತಾ ವಿಜಯ ಆಲ್ಫ್ರೆಡ್, ಶ್ರೀದೇವಿ ಎಜುಕೇಶನ್ ಟ್ರಸ್ಟ್ನ ಎಂಡಿ ಎ.ಸದಾನಂದ ಶೆಟ್ಟಿ, ಮುಡಾ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಕಾವು ಹೇಮನಾಥ ಶೆಟ್ಟಿ, ಯೋಗೀಶ್ ಶೆಟ್ಟಿ, ಪ್ರವೀಣ್ಚಂದ್ರ ಆಳ್ವ, ಭಾಸ್ಕರ ಮೊಲಿ, ವಿಶ್ವಾಸ್ದಾಸ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಗೂಡುದೀಪ ಸ್ಪರ್ಧೆಯಲ್ಲಿ ಸುಮಾರು 75 ಗೂಡುದೀಪಗಳು ಪಾಲ್ಗೊಂಡಿದ್ದು, ಜನಾಕರ್ಷಣೆಯ ಕೇಂದ್ರವಾಗಿತ್ತು. ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ‘ಭಾವೈಕ್ಯತಾ ವೈಶಿಷ್ಟತೆ’ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ ಶಾಲೆಯ 18 ಮಂದಿ ವಿದ್ಯಾರ್ಥಿಗಳು ಮತ್ತು ಪ್ರಥಮ ಹಾಗೂ ದ್ವಿತೀಯ ಪಿಯುಸಿಯ 14 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಕ್ಕಳಿಗಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ 38 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅಕ್ಕಿ ವಿತರಣೆ ಮತ್ತು ಅಗತ್ಯವಿದ್ದರಿಗೆ ಕನ್ನಡಕಗಳ ವಿತರಣೆ ನಡೆಯಿತು.

Comments are closed.