ಕರಾವಳಿ

ಉಡುಪಿ: ಟ್ಯಾಂಕರ್ ಡಿಕ್ಕಿಯಾಗಿ ಬಸ್ ಪಲ್ಟಿ; ಹಲವಾರು ಪ್ರಯಾಣಿಕರಿಗೆ ಗಾಯ

Pinterest LinkedIn Tumblr

ಉಡುಪಿ: ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್ ಪಲ್ಟಿಯಾಗಿದ್ದು ಬಸ್ಸಿನಲ್ಲಿದ್ದ ೨೦ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಉಡುಪಿಯ ಕಿನ್ನಿಮೂಲ್ಕಿ ಎಂಬಲ್ಲಿ ನಡೆದ ಘಟನೆ ಇದಾಗಿದೆ.

udupi_accident_bus-pulti-1 udupi_accident_bus-pulti-2 udupi_accident_bus-pulti-3 udupi_accident_bus-pulti-4 udupi_accident_bus-pulti-5

ಘಟನೆ ವಿವರ: ಮಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಬ್ರೇಕ್ ಹಾಕಿದಾಗ ಹಿಂಬದಿಯಲ್ಲಿ ಆಗಮಿಸಿದ ಗ್ಯಾಸ್ ತುಂಬಿದ್ದ ಟ್ಯಾಂಕರ್ ಬಸ್ಸಿಗೆ ಹಿಂದಿನಿಂದ ಡಿಕ್ಕಿಯಾಗಿದೆ. ಟ್ಯಾಂಕರ್ ಡಿಕ್ಕಿಯಿಂದ ಬಸ್ಸು ಪಲ್ಟಿಯಾಗಿದ್ದು
ಬಸ್ಸಿನೊಳಗಿದ್ದ ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಉಡುಪಿ ಸಂಚಾರಿ ಪೋಲಿಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದರು. ಅಪಘಾತದ ತರುವಾಯ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಪೋಲಿಸರು ಸಂಚಾರ ಸುಗಮಗೊಳಿಸಿದ್ದಾರೆ.

ಗಾಯಳುಗಳು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.