ಕರಾವಳಿ

ಕನ್ನಡಿಗರು ಸ್ವಂತಿಕೆ ಮರೆಯ ಬಾರದು :ರಾಜೋತ್ಸವ ಸಾಂಸ್ಕ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಪ್ರೊ.ಬಿ.ಎಂ.ಇಚ್ಲಂಗೋಡ್ ಕರೆ

Pinterest LinkedIn Tumblr

towhall_rajostva_1

ಮಂಗಳೂರು,ನ.2: ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದಕ ಕನ್ನಡ ರಾಜೋತ್ಸವದ ಸಾಂಸ್ಕ್ಕೃತಿಕ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ನಡೆಯಿತು.

towhall_rajostva_2 towhall_rajostva_3

ಹಿರಿಯ ಸಾಹಿತಿ ಪ್ರೊ.ಬಿ.ಎಂ.ಇಚ್ಲಂಗೋಡು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕನ್ನಡಿಗರು ಸ್ವಂತಿಕೆಯನ್ನು ಮರೆತು ವರ್ತಿಸಬಾರದು. ಕನ್ನಡತನವನ್ನು ಉಳಿಸಿಕೊಳ್ಳಲು ಬದ್ಧರಾಗೋಣ ಎಂದು ಕರೆ ನೀಡಿದರು.

towhall_rajostva_4 towhall_rajostva_5 towhall_rajostva_6 towhall_rajostva_7 towhall_rajostva_8 towhall_rajostva_9

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ನಮ್ಮ ಭಾಷೆ,ಸಂಸ್ಕೃತಿ ಪರಂಪರೆ ನಮ್ಮೆಲ್ಲರನ್ನು ಒಂದು ಗೂಡಿಸುವಂತಾಗಬೇಕು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಮುಂಬೈನಲ್ಲಿ ನೆಲೆಸಿರುವ ಬಾಲಪ್ರತಿಭೆಗಳನ್ನು, ಕಾಸರಗೋಡು, ಸ್ಥಳೀಯ ಕನ್ನಡದ ಬಾಲ ಪ್ರತಿಭೆಗಳಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದನೆ, ಕವಿಗೋಷ್ಠಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಮಾರಂಭದಲ್ಲಿ ಮಂಗಳೂರು ಸಹಾಯಕ ಕಮಿಷನರ್ ರೇಣುಕಾ ಪ್ರಸಾದ್, ತಹಶೀಲ್ದಾರ್ ಮಹಾದೇವಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೊ ಮೊದಲಾದವರು ಉಪಸ್ಥಿತರಿದ್ದರು.

 

Comments are closed.