ಕರಾವಳಿ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷೆ ಶಾರದಾ ಮೋಹನ್ ಶೆಟ್ಟಿ ಅಧಿಕಾರ ಸ್ವೀಕಾರ

Pinterest LinkedIn Tumblr

sharada_mohan_shetty_1

ಮಂಗಳೂರು, ನ.4: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷೆಯಾಗಿ ಶಾರದಾ ಮೋಹನ್ ಶೆಟ್ಟಿ ಅವರು ನೇಮಕಗೊಂಡಿದ್ದು, ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರ ಶಾಸಕಿಯು ಆಗಿರುವ ಶಾರದಾ ಮೋಹನ್ ಶೆಟ್ಟಿ ಅವರು ಶುಕ್ರವಾರ ಮಂಗಳೂರಿನ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

sharada_mohan_shetty_2

ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರಾವಳಿಯ ಮೂರು ಜಿಲ್ಲೆಗಳ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಮತ್ತು ಸ್ಥಳೀಯ ಸಮಸ್ಯೆಗಳಿಗೆ ಅನುಗುಣವಾಗಿ ಯೋಜನೆ ರೂಪಿಸುವ ಮೂಲಕ ಹಂತಹಂತವಾಗಿ ಬೆಳೆಯುತ್ತಿರುವ ಪ್ರಾಧಿಕಾರವನ್ನು ಮತ್ತಷ್ಟು ಸಶಕ್ತಗೊಳಿಸಬೇಕಿದೆ.ಈ ನಿಟ್ಟಿನಲ್ಲಿ ಪ್ರಾಧಿಕಾರದ ಅಭಿವೃದ್ಧಿಗೆ ಇನ್ನಷ್ಟು ಅನುದಾನದ ಅಗತ್ಯವಿದೆ ಎಂದು ಹೇಳಿದರು.

sharada_mohan_shetty_3 sharada_mohan_shetty_4

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೋ ಅವರು ಮಾತನಾಡಿ, ಪ್ರಾಧಿಕಾರಕ್ಕೆ ಪರಿಸರ ಅಭಿಯಂತರ ನೇಮಕವಾಗಿದೆ. ಪ್ರಮುಖವಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆ ನೇಮಕಾತಿ ಬಾಕಿಯಿದೆ. ವಿವಿಧ ಹಂತದ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದ್ದು, ಹಂತಹಂತವಾಗಿ ಸಿಬ್ಬಂದಿಗಳ ನೇಮಕವಾಗಲಿದೆ ಎಂದು ಪ್ರತಿಕ್ರಿಯಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಅರುಣ್ ಕುವೆಲ್ಲೋ,ವಿವಿಧ ಜನಪ್ರತಿನಿಧಿಗಳು ಹಾಗೂ ಇನ್ನಿತರ ಸಂಬಂಧ ಪಟ್ಟ ಅಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು

Comments are closed.