ಕರಾವಳಿ

ಅಶ್ಲೀಲ ಚಿತ್ರ ವೀಕ್ಷಣೆ ಹಿನ್ನೆಲೆ : ಸಚಿವ ತನ್ವೀರ್ ಸೇಠ್ ರಾಜೀನಾಮೆ ಅನಿವಾರ್ಯ : ಮಂಗಳೂರಿನಲ್ಲಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ

Pinterest LinkedIn Tumblr

kumaraswami_press_1

ಮಂಗಳೂರು, ನ.12: ಸಾರ್ವಜನಿಕ ವೇದಿಕೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಆರೋಪವನ್ನು ಎದುರಿಸುತ್ತಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್ ರಾಜಿನಾಮೆ ನೀಡಬೇಕು. ಅವರಾಗಿ ನೀಡದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ವೀರ್ ಸೇಠ್ ರ ರಾಜೀನಾಮೆಯನ್ನು ಬಲವಂತವಾಗಿ ಪಡೆಯಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಈ ಹಿಂದೆ ರಾಜ್ಯ ವಿಧಾನಸಭಾ ಕಲಾಪದ ಸಂದರ್ಭದಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದ ಮೂವರು ಸಚಿವರು ರಾಜೀನಾಮೆ ನೀಡಿದಂತೆ ಸಾರ್ವಜನಿಕ ವೇದಿಕೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಆರೋಪವನ್ನು ಎದುರಿಸುತ್ತಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್ ರ ರಾಜೀನಾಮೆಯೂ ಅನಿವಾರ್ಯವಾಗಿದೆ ಎಂದು ಹೇಳಿದರು.

kumaraswami_press_2

ವಿಧಾನಸಭೆಯಲ್ಲಿ ನೀಲಿ ಚಿತ್ರ ವೀಕ್ಷಿಸಿದ್ದವರ ರಾಜೀನಾಮೆಗೆ ಒತ್ತಾಯಿಸಿದ್ದ ಸಿದ್ದರಾಮಯ್ಯ ಸೇಠ್ ರನ್ನು ಸಮರ್ಥಿಸುವುದು ಯಾಕೆ? ಎಂದು ಪ್ರಶ್ನಿಸಿದ ಅವರು, ಟಿಪ್ಪು ಜಯಂತಿಯು ನಗ್ನ ಚಿತ್ರ ವೀಕ್ಷಣೆಗೆ ಮೀಸಲಾಯಿತು. ತನ್ವೀರ್ ಸೇಠ್ ಏನು ನೋಡಿದ್ದಾರೋ ಗೊತ್ತಿಲ್ಲ. ಆದರೆ ಟಿಪ್ಪುಜಯಂತಿ ಸರಕಾರಿ ಕಾರ್ಯಕ್ರಮದಲ್ಲಿ ಈ ರೀತಿಯ ವರ್ತನೆಗೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಬೇಕು. ವರದಿ ಕೇಳುವ ನೆಪದಲ್ಲಿ ಸಚಿವರ ರಾಜೀನಾಮೆ ಪಡೆಯುವಲ್ಲಿ ವಿಳಂಬ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಟಿಪ್ಪು ಜಯಂತಿ ವಿಚಾರ : ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಕಾಲಹರಣ:

ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸುವ ಬದಲು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಜಯಂತಿ ಟಿಪ್ಪು ಆಚರಣೆ ವಿಷಯದಲ್ಲಿ ಕಾಲಹರಣ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರಬೇಕಾಗಿರುವ ಈ ರಾಷ್ಟ್ರೀಯ ಪಕ್ಷಗಳು ತಮ್ಮ ಸ್ವಾರ್ಥ ಸಾಧನೆ ಮತ್ತು ಆಕಾಂಕ್ಷೆಗಳಿಗೆ ಪೈಪೋಟಿಗಳಿದಂತಿದೆ ಎಂದು ಆರೋಪಿಸಿದರು.

kumaraswami_press_3

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಅಮರನಾಥ ಶೆಟ್ಟಿ, ದ.ಕ.ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಕಾರ್ಯಾಧ್ಯಕ್ಷ ಎಸ್.ಪಿ.ಚೆಂಗಪ್ಪ, ನಗರಾಧ್ಯಕ್ಷ ಎ.ವಸಂತ ಪೂಜಾರಿ, ಜೆಡಿಎಸ್ ಮುಖಂಡ ಬಿ.ಎಂ.ಫಾರೂಕ್, ಪ್ರಮುಖರಾದ ಅಜೀಝ್ ಕುದ್ರೋಳಿ, ರಮೀಝಾ ನಾಸೀರ್, ರತ್ನಾಕರ ಸುವರ್ಣ, ಮುನೀರ್ ಮುಕ್ಕಚ್ಚೇರಿ, ಅಕ್ಷಿತ್ ಸುವರ್ಣ, ನಾಸಿರ್ ಬಂದರ್ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments are closed.