ಕರಾವಳಿ

ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಡಿ. 10, 11 ಮತ್ತು 12ರಂದು ರಥಯಾತ್ರೆ

Pinterest LinkedIn Tumblr

Nalin_bava_press_1

File Pics

ಬೆಳ್ತಂಗಡಿ, ನ.14: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಡಿ. 10, 11 ಮತ್ತು 12ರಂದು ಜಿಲ್ಲಾದ್ಯಂತ ರಥಯಾತ್ರೆ ನಡೆಸಲಾಗುವುದು ಎಂದು ಸಂಸದ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.

ಇಂದು ಬೆಳ್ತಂಗಡಿ ತಾಲೂಕಿನಲ್ಲಿನ ಗ್ರಾಮ ಭೇಟಿ ಸಂದರ್ಭ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಸುದ್ಧಿಗಾರರೊಂದಿಗೆ ಮಾತನಾಡಿದರು.

ಎತ್ತಿನಹೊಳೆಯೆಂಬ ನೇತ್ರಾವತಿ ತಿರುವು ಹಾಗೂ ಕುಮಾರಧಾರಾ ತಿರುವು ಯೋಜನೆಗಳ ಮೂಲಕ ದ.ಕ. ಜಿಲ್ಲೆಯ ಜನತೆಯನ್ನು ತುಳಿಯುವ ತಂತ್ರಗಾರಿಕೆಯನ್ನು ರಾಜ್ಯ ಸರಕಾರ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಇದನ್ನು ತಡೆಯುವ ಉದ್ದೇಶದಿಂದ ಈ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಎತ್ತಿನಹೊಳೆ ವಿರುದ್ಧ ಪಂಚತೀರ್ಥ, ಸಪ್ತಕ್ಷೇತ್ರ ಎಂಬ ಹೆಸರಿನಲ್ಲಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗುವುದು. ಇದಾದ ಬಳಿಕ ಒಂದು ತಿಂಗಳಲ್ಲಿ ಸರಕಾರ ಸ್ಪಂದನೆ ತೋರದಿದ್ದಲ್ಲೆ ಜ.26ರಂದು ತೀವ್ರ ಹೋರಾಟಕ್ಕೆ ಚಾಲನೆ ನೀಡಲಾಗುವುದು. ಇದಕ್ಕೆ ಜಿಲ್ಲೆಯ ಜನತೆಯೂ ಕೈ ಜೋಡಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ಜಿಲ್ಲಾ ಪ್ರಧಾನ ವಕ್ತಾರ ಜಿತೇಂದ್ರ ಕೊಟ್ಟಾರಿ, ಉಪಾಧ್ಯಕ್ಷ ಶಾರದಾ ರೈ, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ, ಮಾಜಿ ಶಾಸಕ ಪ್ರಭಾಕರ ಬಂಗೇರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜಾ, ಮಂಡಲ ಅಧ್ಯಕ್ಷ ರಂಜನ್ ಜಿ. ಗೌಡ. ಕಾರ್ಯದರ್ಶಿ ಸೀತಾರಾಮ ನಾಯ್ಕ, ತಾಪಂ ಸದಸ್ಯ ವಿಜಯಗೌಡ, ಸುಧೀರ್ ಸುವರ್ಣ ಮತ್ತಿತರರು ಈ ವೇಳೆ ಸಂಸದರ ಜೊತೆಗಿದ್ದರು.

Comments are closed.