ಕರಾವಳಿ

ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಾಳೆ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ

Pinterest LinkedIn Tumblr

vhp_press-meet_1

ಮಂಗಳೂರು, ನವೆಂಬರ್. 14: “ರಾಜ್ಯದಲ್ಲಿ ಹಿಂದೂಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಹಾಗೂ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಕೊಲೆ ಪ್ರಯತ್ನ,ಬೆದರಿಕೆ, ದೌರ್ಜನ್ಯದ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಗಮನ ಸೆಳೆಯುವ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಅಶ್ರಯದಲ್ಲಿ ನವೆಂಬರ್ 15 ರಂದು ಬೆಳಗ್ಗೆ 10 ಗಂಟೆಗೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಹಿಂದೂ ಹಿತರಕ್ಷಣ ವೇದಿಕೆಯ ಸಂಚಾಲಕ ಎಂ.ಬಿ. ಪುರಾಣಿಕ ತಿಳಿಸಿದ್ದಾರೆ.

ನಗರದ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಯಾವೂದೇ ಜಾತಿ, ಧರ್ಮ ಅಥವಾ ನಿರ್ದೀಷ್ಟ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಈ ಪ್ರತಿಭಟನೆಯನ್ನು ಹಮ್ಮಿಕೊಂಡಿಲ್ಲ. ಬದಲಾಗಿ ಜಿಲ್ಲೆಯಲ್ಲಿ ಅಹಿತಕರ ಘಟನೆಗಳ ಮೂಲಕ ಶಾಂತಿ ಕದಡುವವರ ವಿರುದ್ಧ ನಾವು ಹೋರಾಟ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದರು.

vhp_press-meet_2 vhp_press-meet_3

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಎಮ್.ಎಲ್.ಸಿ ಮೋನಪ್ಪ ಭಂಡಾರಿ, ಬಜರಂಗದಳದ ಸಂಚಾಲಕ ರಾಜ್ಯ ಶರಣ್ ಪಂಪ್‍೬ವೆಲ್, ವಿಎಚ್.ಪಿ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟಾ, ಬಜರಂಗದಳದ ಜಿಲ್ಲಾ ಸಂಚಾಲಕಪುನೀತ್, ಎಬಿವಿಪಿ ವಿಭಾಗೀಯ ಸಂಚಾಲಕ ಸುಕೇಶ್ ಬೇಕಲ್ ಮುಂತಾದವರು ಉಪಸ್ಥಿತರಿದ್ದರು.

vhp_press-meet_4 vhp_press-meet_5

ಪ್ರತಿಭಟನೆಗೆ ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ಬೆಂಬಲ :

ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಹತ್ತಿಕುವ ಸಲುವಾಗಿ ನಾಳೆ ತೊಕ್ಕೊಟ್ಟಿನಲ್ಲಿ ಹಿಂದೂ ಹಿತ ರಕ್ಷಣ ಸಮಿತಿ ನೇತ್ರತ್ವದಲ್ಲಿ ನಡೆಯುವ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಉಡುಪಿ ಜಿಲ್ಲಾ ಹಿಂದೂ ಜಾಗರಣ ವೇದಿಕೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಸುಮಾರು 2 ವರ್ಷಗಳಿಂದ ನಿರಂತರವಾಗಿ ಹಿಂದೂಗಳ ಮೇಲೆ ಹಲ್ಲೆ ನಡೆಯುತ್ತಾ ಇದೆ. ಮುಖ್ಯವಾಗಿ ಉಳ್ಳಾಲದಲ್ಲಿ ಸುಮಾರು 6 ಹಿಂದೂಗಳ ಮೇಲೆ ಚಾಕು ಇರಿತ ಹಾಗೂ 3 ಹಿಂದೂಗಳ ಹತ್ಯೆ ನಡೆದಿದೆ ಎಂದು ಹಿಂದೂ ಜಾಗರಣ ವೇದಿಕೆ ಆರೋಪಿಸಿದೆ.

Comments are closed.