ಕರಾವಳಿ

ಕುಂದಾಪುರ(ಮುಳ್ಳಿಕಟ್ಟೆ): ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Pinterest LinkedIn Tumblr

ಕುಂದಾಪುರ: ಬಾವಿಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರದ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ನಲವತ್ತಾರು ವರ್ಷ ಪ್ರಾಯದ ಪದ್ಮಾವತಿ ಆತ್ಮಹತ್ಯೆ ಮಾಡಿಕೊಂಡವರು.

kundapura_mullikatte_lady-suside-2 kundapura_mullikatte_lady-suside-3 kundapura_mullikatte_lady-suside-1

ಮಾನಸಿಖ ಖಿನ್ನತೆಯಿಂದ ಬಳಲುತ್ತಿದ್ದ ಪದ್ಮಾವತಿ ಅವರು ತಡರಾತ್ರಿ ಮನೆ ಆವರಣದಲ್ಲಿರುವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಮನೆಯಲ್ಲಿ ಇವರನ್ನು ಹುಡುಕಾಡುವ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬವಿಯಲ್ಲಿ ಶವ ಪತ್ತೆಯಾದ ಬಳಿಕ ಪೊಲೀಸರಿಗೆ ಹಾಗೂ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದ್ದು ಅಗ್ನಿಶಾಮಕದಳದವರು ಆಗಮಿಸಿ ಶವವನ್ನು ಮೇಲಕ್ಕೆತ್ತಿದ್ದಾರೆ.

ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.