ಕರಾವಳಿ

ಒಂದು ವರ್ಷದಲ್ಲಿ 11 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ : ಗೃಹ ಸಚಿವ ಡಾ.ಜಿ.ಪರಮೇಶ್ವರ್

Pinterest LinkedIn Tumblr

panambur_parameshvar_1

ಮಂಗಳೂರು,ನ.19: ಮಂಗಳೂರು ನಗರ ಪೊಲೀಸ್ ಸಹಾಯಕ ಆಯುಕ್ತರ ಕಚೇರಿ,ಉತ್ತರ ಉಪ ವಿಭಾಗ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಕಟ್ಟಡಗಳ ಸಂಕೀರ್ಣ ಹಾಗೂ 16 ಪೊಲೀಸ್ ಸಿಬ್ಬಂದಿಯವರ ವಸತಿ ಗೃಹ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಉದ್ಘಾಟಿಸಿದರು.

panambur_parameshvar_2

panambur_parameshvar_4

ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಂದು ವವರ್ಷದೊಳಗೆ 11 ಸಾವಿರ ಪೊಲೀಸ್ ವಸತಿ ಗೃಹಗಳನ್ನು ಮತ್ತು ರಾಜ್ಯದಲ್ಲಿರುವ ಎಲ್ಲಾ ಪೊಲೀಸರಿಗೂ ವಸತಿಗೃಹ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಂದನೇ ಹಂತದಲ್ಲಿ ಎರಡೂವರೆ ಸಾವಿರ ಮನೆಗಳನ್ನು ಹಾಗೂ ಎರಡನೆ ಹಂತದಲ್ಲಿ 4,800 ಮನೆಗಳನ್ನು ಒಟ್ಟು 11ಸಾವಿರ ಮನೆಗಳನ್ನು ಪೊಲೀಸರಿಗೆ ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ.ರಾಜ್ಯದಲ್ಲಿರುವ ಒಂದು ಲಕ್ಷ ಪೊಲೀಸ್ ಸಿಬ್ಬಂದಿಗೂ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

panambur_parameshvar_3

panambur_parameshvar_5

ರಾಜ್ಯ ಅರಣ್ಯ,ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾ ಥ ರೈ ಮಾತನಾಡಿ, ಪೊಲೀಸ್ ವ್ಯವಸ್ಥೆ ಉತ್ತಮವಾದಾಗ ರಾಜ್ಯದ ಆಡಳಿತದ ಬಗ್ಗೆ ಜನರಿಗೆ ಹೆಚ್ಚಿನ ವಿಶ್ವಾಸ ಮೂಡುತ್ತದೆ, ಸರಕಾರದ ಸಾಮರ್ಥ್ಯವನ್ನು ಅಳೆಯಲಾಗುತ್ತದೆ. ಜಿಲ್ಲೆಯ ಶಾಂತಿ ಸೌರ್ಹಾದತೆಗೆ ಉತ್ತಮ ಪೊಲೀಸ್ ವ್ಯವಸ್ಥೆ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.

panambur_parameshvar_6 panambur_parameshvar_7 panambur_parameshvar_8

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊಹಿಯುದ್ದೀನ್ ಬಾವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಹಾಗೂ ಮಾಜಿ ಸಚಿವ ಅಭಯ ಚಂದ್ರ ಜೈನ್,ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ ಸೋಜ ,ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷ ಎಂ.ಎ.ಗಫೂರ್ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸುನಿಲ್ ಕುಮಾರ್ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಜಿ.ಅರುಣ್ ಚಕ್ರವರ್ತಿ ಮಂಗಳೂರು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಮೊದಲಾದವರು ಉಪಸ್ಥಿತರಿದ್ದರು.

Comments are closed.