ಕರಾವಳಿ

ಸಿ.ಎಂ. ಸಿದ್ದರಾಮಯ್ಯರವರಿಂದ ಇಂದಿರಾ ಗಾಂಧಿ ಜನ್ಮ ಶತಾಬ್ಧಿ ಭವನ ಹಾಗೂ ಕಾಂಗ್ರೆಸ್‌ನ ನೂತನ ಕಚೇರಿ ಉದ್ಘಾಟನೆ

Pinterest LinkedIn Tumblr

congrss_cm_visit_1

ಮಂಗಳೂರು, ನ.19: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ನಗರದ ಮಲ್ಲಿಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾಜಿ ಪ್ರಧಾನಿ ದಿ| ಇಂದಿರಾ ಗಾಂಧಿ ಜನ್ಮ ಶತಾಬ್ಧಿ ಭವನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ನೂತನ ಕಚೇರಿಯನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

congrss_cm_visit_2 congrss_cm_visit_3

ಸಮಾರಂಭದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದಿನೇಶ್ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಡಾ.ಎ.ಚೆಲ್ಲ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

congrss_cm_visit_4 congrss_cm_visit_5

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾ ಕೆ.ಅಭಯಚಂದ್ರ ಜೈನ್, ಬಿ.ಎ.ಮೊಯ್ದಿನ್ ಬಾವ, ಪಕ್ಷದ ಸ್ಥಳೀಯ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments are closed.