
ಬೆಳ್ತಂಗಡಿ, ನ.24: ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಲಕ್ಷದೀಪೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಹೊಸಕಟ್ಟೆ ಉತ್ಸವದ ಮೂಲಕ ಲಕ್ಷದೀಪೋತ್ಸವ ಪ್ರಾರಂಭವಾಗಲಿದೆ.
ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಕ್ರೀಡಾಂಗಣದಲ್ಲಿ 39ನೆ ವರ್ಷದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಎಸ್ಡಿಎಂ ಪ್ರೌಢಶಾಲಾ ವಠಾರದಲ್ಲಿ ನಡೆಯಲಿದೆ. ಸಂಜೆ 5ಕ್ಕೆ ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ವಸ್ತು ಪ್ರದರ್ಶನ ಉದ್ಘಾ ಟಿಸುವರು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ನ.27ರಂದು ನಡೆಯುವ 84ನೆ ಸವರ್ಧರ್ಮ ಸಮ್ಮೇಳನ ಶಿರಹಟ್ಟಿಯ ಫಕೀರ ಸಿದ್ದರಾಮ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನ.27ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ವಿ. ಗೋಪಾಲ ಗೌಡ ಉದ್ಘಾಟಿಸುವರು.. ನ.28ರಂದು ನಡೆಯುವ ಸಾಹಿತ್ಯ ಸಮ್ಮೇಳನ ಖ್ಯಾತ ಸಾಹಿತಿ ಎಂ. ಎನ್. ವ್ಯಾಸರಾವ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಉದ್ಘಾಟಿಸಲಿದ್ದಾರೆ.
ಪ್ರತಿ ದಿನ ಬೆಳಗ್ಗೆ 9 ರಿಂದ ರಾತ್ರಿ 9 ರವರೆಗೆ ವಸ್ತು ಪ್ರದ ರ್ಶನಕ್ಕೆ ಉಚಿತ ಪ್ರವೇಶಾವಕಾಶವಿದೆ. ನವದೆಹಲಿಯ ಡಾ.ಜಯಕುಮಾರ್ ಉಪಾಧ್ಯೆ, ಪುತ್ತೂರಿನ ಯಕ್ಷಗಾನ ಕಲಾವಿದ ಜಬ್ಬಾರ್ ಸಮೊ ಮತ್ತು ಧಾರವಾಡದ ವಿದ್ಯಾ ನಿಕೇತನದ ನಿರ್ದೇಶಕ ಪ್ರಶಾಂತ್ ಡಿಸೋಜ ಧಾರ್ಮಿಕ ಉಪನ್ಯಾಸ ನೀಡುವರು. ನ.28ರಂದು ಸಾಹಿತ್ಯ ಸಮ್ಮೇಳನವನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್ ಉದ್ಘಾ ಟಿಸುವರು. ಬರಹಗಾರ ಬೆಂಗಳೂರಿನ ವಸುಧೇಂದ್ರ, ಸ್ತ್ರೀರೋಗ ತಜ್ಞೆ ಸುಳ್ಯದ ಡಾ. ವೀಣಾ ಮತ್ತು ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ ಉಪನ್ಯಾಸ ನೀಡಲಿರುವರು.
6 ದಿನಗಳ ಕಾಲ ಕ್ಷೇತ್ರದಲ್ಲಿ ವಿವಿಧ ಸಾಹಿತ್ಯಿಕ, ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ.
ನ. 29ರಂದು ನಡೆಯುವ ಶ್ರೀ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ ಮೂಲಕ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ಮುಕ್ತಾಯಗೊಳ್ಳಲಿವೆ. 6 ದಿನಗಳ ಕಾಲ ಕ್ಷೇತ್ರದಲ್ಲಿ ವಿವಿಧ ಸಾಹಿತ್ಯಿಕ, ಸಾಂಸ್ಕೃತಿಕ, ಮನೋರಂಜನಾ ಕಾರ್ಯಕ್ರಮಗಳು ವೈಭವದಿಂದ ಸಂಪನ್ನಗೊಳ್ಳಲಿವೆ.
Comments are closed.