ಕರಾವಳಿ

ಸ್ಥಳೀಯ ಸುದ್ದಿವಾಹಿನಿಯೊಂದರ ಸುದ್ಧಿ ವಾಚಕಿಯ ಪತಿ ನೇಣು ಬಿಗಿದು ಆತ್ಮಹತ್ಯೆ

Pinterest LinkedIn Tumblr

harish_priya_sucide

ಮಂಗಳೂರು : ನಗರದಲ್ಲಿ ಕಾರ್ಯಾಚರಿಸುತ್ತಿರುವ ಸ್ಥಳೀಯ ಸುದ್ದಿವಾಹಿನಿಯೊಂದರ ಸುದ್ಧಿ ವಾಚಕಿಯೋರ್ವರ ಪತಿ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ದೇರೆಬೈಲ್ ಕೊಂಚಾಡಿ ಸಮೀಪ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹರೀಶ್ ರಾವ್ (50) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಕುಂದಾಪುರದವರಾಗಿದ್ದು, ಮದುವೆ ಬಳಿಕ ಮಂಗಳೂರಿನಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ.

ಹರೀಶ್ ರಾವ್ ನಗರದಲ್ಲಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಪತ್ನಿ ಪ್ರಿಯಾ ಸ್ಥಳೀಯ ಸುದ್ದಿವಾಹಿನಿಯೊಂದರಲ್ಲಿ ಆ್ಯಂಕರ್ ಆಗಿ ಕಾರ್ಯನಿರ್ವಾಹಿಸುತ್ತಿದ್ದರು. ದಂಪತಿಗಳಿಗೆ ಓರ್ವ ಪುತ್ರಿ ಪ್ರಿಹಲಿ ಮತ್ತು ಒರ್ವ ಪುತ್ರನಿದ್ದಾನೆ.

ದೇರೆಬೈಲ್ ಕೊಂಚಾಡಿ ಬಳಿ ಇರುವ ಮನೆಯಲ್ಲಿ ಹರೀಶ್ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹರೀಶ್ ರಾವ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ನಿನ್ನೆ ರಾತ್ರಿ ಎಂದಿನಂತೆ ಮಲಗಿದ್ದ ಅವರು ತಡರಾತ್ರಿ ಎದ್ದು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಹರೀಶ್ ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

ಸ್ಥಳಕ್ಕೆ ಕಾವೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾವೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.