ಕರಾವಳಿ

ರೈತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಹೇಳಿಕೆ ನೀಡಿಲ್ಲ : ಜಿಲ್ಲಾಧಿಕಾರಿ ಸ್ಪಷ್ಟಣೆ

Pinterest LinkedIn Tumblr

New_Dc_charge_3

ಮಂಗಳೂರು, ನ.28: ಜಿಲ್ಲೆಯ ನದಿ ತಟದಿಂದ ನೀರು ಬಳಸಿದರೆ ರೈತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವವುದಾಗಿ ಯಾವುದೇ ಆದೇಶ ನೀಡಿಲ್ಲ ಎಂದು ದ.ಕ.ಜಿಲ್ಲಾಧಿಕಾರಿ ಡಾ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳಲ್ಲಿ ಜನವರಿಯಿಂದ ಜಿಲ್ಲೆಯ ನದಿ ತಟದಿಂದ ನೀರು ಬಳಸಿದರೆ ರೈತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ ಎಂದು ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಪ್ರಕಟನೆ ನೀಡಿದ್ದಾರೆ.

ನ.5ರಂದು ನಡೆದ ಸಭೆಯಲ್ಲಿ ನೀರಿನ ಸಮಸ್ಯೆಯನ್ನು ನೀಗಿಸುವ ಸಲುವಾಗಿ ಮುಂಜಾಗರೂಕತಾ ಕ್ರಮವಾಗಿ ಜನವರಿ, ಫೆಬ್ರವರಿ, ಮಾರ್ಚ್, ಎಪ್ರಿಲ್ ತಿಂಗಳಲ್ಲಿ ತೋಟಗಾರಿಕಾ ಬೆಳೆಗಳನ್ನು ಹೊರತುಪಡಿಸಿ ಕೃಷಿ ಬೆಳೆಗಳಿಗೆ ನದಿ ತಟ, ಕಿಂಡಿ ಅಣೆಕಟ್ಟುಗಳಿಂದ ನೀರು ಬಳಸುವಂತಿಲ್ಲ. ಈ ಬಗ್ಗೆ ರೈತರಿಗೆ ತಿಳುವಳಿಕೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಮತ್ತು ನೀರು ಬಳಸಿದರೆ ವಿದ್ಯುತ್ ಸಂಪರ್ಕ ಕಡಿದು ಹಾಕಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಅದು ಬಿಟ್ಟು ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.

Comments are closed.