ಕರಾವಳಿ

ಕಲ್ಲಡ್ಕ ಸಮೀಪ ಭೀಕರ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

Pinterest LinkedIn Tumblr

kalladka-axident_1

ಬಂಟ್ವಾಳ, ಡಿಸೆಂಬರ್. 1 : ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬಂಟ್ವಾಳ ಠಾಣಾ ವ್ಯಾಪ್ತಿಯ ಕಲ್ಲಡ್ಕ ಸಮೀಪದ (ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ) ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಬೋಳಂಗಡಿ ನಿವಾಸಿ ಸುದರ್ಶನ್ ಶೆಟ್ಟಿ (29) ಎಂದು ಗುರುತಿಸಲಾಗಿದೆ.

ಸುದರ್ಶನ್ ಮಾಣಿಯಿಂದ ಕಲ್ಲಡ್ಕ ರಸ್ತೆಯಾಗಿ ಚಲಿಸುತ್ತಿದ್ದಾಗ ಕುದ್ರೆಬೆಟ್ಟು ಬಳಿ ತಲುಪುತಿದ್ದಂತೆ ಮುಂದುನಿಂದ ವೇಗವಾಗಿ ಬರುತ್ತಿದ್ದ 10 ಚಕ್ರಗಳ ಬೃಹತ್ ಲಾರಿಯೊಂದು ಬೈಕಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಬೈಕ್ ನಜ್ಜುಗುಜ್ಜಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಸುದರ್ಶನ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಬೈಕಿಗೆ ಡಿಕ್ಕಿ ಹೊಡೆದ ಲಾರಿ ಬಳಿಕ ಚಾಲಕನ ನಿಯಂತ್ರಣ ತಪ್ಪಿ ಅನತಿ ದೂರದಲ್ಲಿ ರಸ್ತೆ ಪಕ್ಕದಲ್ಲಿದ್ದ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ಲಾರಿಯೊಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಬಂಟ್ವಾಳ ಸಂಚಾರಿ ಪೊಲೀಸರು ವಾಹನಗಳನ್ನು ತೆರವುಗೊಳಿಸುವ ಮೂಲಕ ಇತರ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Comments are closed.