ಕರಾವಳಿ

ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಆಗ್ರಹಿಸಿ ಡಿವೈಎಫ್‌ಐ ಪ್ರತಿಭಟನೆ

Pinterest LinkedIn Tumblr

dyfi_protest_pics_1

ಮಂಗಳೂರು, ಡಿ.6: ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಅನಗತ್ಯ ಚಿಕಿತ್ಸೆ, ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ಶುಲ್ಕದ ದರಪಟ್ಟಿಯನ್ನು ಪ್ರಕಟಿಸದಿರುವುದು ಸೇರಿದಂತೆ ಹಲವು ನಿಯಮಗಳನ್ನು ಉಲಂಘಿಸಲಾಗುತ್ತಿದೆ ಎಂದು ಡಿವೈಎಫ್‌ಐ ರಾಜಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದರು.

ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವ ಮೂಲಕ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಲು, ಜಿಲ್ಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಹಾಗೂ ಆರೋಗ್ಯ ನಿಯಂತ್ರಣ ಸಮಿತಿಯ ಸಭೆ ಕರೆಯಲು ಒತ್ತಾಯಿಸಿ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಡಿವೈಎಫ್‌ಐ ವತಿಯಿಂದ ಹಮ್ಮಿಕೊಳ್ಳಲಾದ ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದರು.

dyfi_protest_pics_2

ಜಿಲ್ಲೆಯಲ್ಲಿ ಸರಕಾರಿ ಆರೋಗ್ಯ ಸೇವೆ ಸಂಪೂರ್ಣ ಹದಗೆಟ್ಟಿದೆ.ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಪ್ರಾಥಮಿಕ ಕೇಂದ್ರಗಳು, ಸಮುದಾಯ ಆಸ್ಪತ್ರೆಗಳು ಸರಾಸರಿ ಗಿಂತ ತೀರ ಕೆಳಮಟ್ಟದಲ್ಲಿವೆ. ತಾಲೂಕು ಜಿಲ್ಲಾಸ್ಪತ್ರೆಗೆ ತೆರಳಲು ಜನರು ಭಯ ಪಡುವಂತಾಗಿದೆ. ಐದಾರು ಜಿಲ್ಲೆಗಳ ಜನಸಾಮಾನ್ಯರ ಪಾಲಿಗೆ ವೆನ್ಲಾಕ್ ಒಂದೇ ದೊಡ್ಡಾಸ್ಪತ್ರೆ ಯಾಗಿದೆ. ಆದರೆ ಈ ಆಸ್ಪತ್ರೆಯು ತುರ್ತು ಚಿಕಿತ್ಸಾ ಘಟಕ ಸಹಿತ ಮೂಲಭೂತ ಸೌಲಭ್ಯವಿಲ್ಲದೆ ಬಡರೋಗಿಗಳಿಗೆ ನರಕದಂತಿದೆ. ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಮಾಡುವಲ್ಲಿ ಜಿಲ್ಲಾಡಳಿತ, ಜನಪ್ರತಿನಿಧಿಗಳು ನಿರ್ಲಕ್ಷ ಧೋರಣೆ ತಾಳಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗಳನ್ನು ಬಳಸಿ ಸರಕಾರಿ ಮೆಡಿಕಲ್ ಕಾಲೇಜು ತೆರೆಯಲು ಎಲ್ಲ ರೀತಿಯ ಅವಕಾಶವಿದೆ. ಆದರೆ ಸರಕಾರವು ಖಾಸಗಿ ಮೆಡಿಕಲ್ ಕಾಲೇಜು ತೆರೆಯಲು ಆಸಕ್ತಿ ವಹಿಸುತ್ತಿವೆ ಎಂದವರು ಆರೋಪಿಸಿದರು.

dyfi_protest_pics_3

ಲೇಡಿಗೋಷನ್ ಕೆಡವಿ 5 ವರ್ಷಗಳು ಕಳೆದಿವೆ. ಇದರ ಕಾಮಗಾರಿ ಇನ್ನೂ ಮುಗಿದಿಲ್ಲ. ವೆನ್ಲಾಕ್ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಬಡವರು ಸಣ್ಣ ಚಿಕಿತ್ಸೆಗಾಗಿ ಅಡ್ಮಿಟ್ ಆದರೂ ಅವರನ್ನು ಹತ್ತು ದಿನ ಇಟ್ಟುಕೊಂಡು ಚಿಕಿತ್ಸೆ ನೀಡುತ್ತಾರೆ. ನಂತರ ಔಷಧಗಳನ್ನು ಖಾಸಗಿಯಾಗಿ ಖರೀದಿಸಲು ಹೇಳುತ್ತಾರೆ ಎಂದವರು ದೂರಿದರು.

ಡಿವೈಎಫ್‌ಐ ಜಿಲ್ಲಾಧ್ಯಕ್ಷ ಹಾಗೂ ಮನಪಾ ಸದಸ್ಯ ದಯಾನಂದ ಶೆಟ್ಟಿ ಮಾತನಾಡಿ, ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಕ್ಷೇತ್ರವಾಗಿ ಪರಿವರ್ತಿಸುವ ಪ್ರಯತ್ನಗಳು ನಡೆಯು ತ್ತಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಿ ಕೋಟ್ಯಂತರ ರೂ. ಲೂಟಿ ಮಾಡಲು ಉದ್ಯಮಿಗಳು ಮುಂದಾಗುತ್ತಿದ್ದಾರೆ. ಇದರಲ್ಲಿ ಸರಕಾರದ ಪಾಲು ಕೂಡ ಇರ ಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಡಿವೈಎಫ್‌ಐ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಜೀವನ್ರಾಜ್ ಕುತ್ತಾರ್, ನಿತಿನ್ ಕುತ್ತಾರ್, ಮಾಧುರಿ ಮೊದಲಾದವರು ಪಾಲ್ಗೊಂಡಿದ್ದರು.

Comments are closed.