ಕರಾವಳಿ

ಕಾರಿನಲ್ಲಿ ಅಕ್ರಮ ಹಣ ಸಾಗಾಟ ; ಲಕ್ಷಾಂತರ ರೂ. ನಗದು ಸಹಿತಾ ಮೂವರು ಆರೋಪಿಗಳ ಸೆರೆ

Pinterest LinkedIn Tumblr

putturu_money_transfer

ಪುತ್ತೂರು: ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಮೂವರನ್ನುಬಂಧಿಸಿರುವ ಪೊಲೀಸರು, 2000ರೂ. ಮುಖಬೆಲೆಯ ನೋಟುಗಳೂ ಸೇರಿದಂತೆ ಒಟ್ಟು 18.80 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಜಾಫರ್ ಶರೀಫ್(28), ಕಲ್ಲಡ್ಕ ಗೋಳ್ತಮಜಲು ಗ್ರಾಮದ ಮಾಣಿಮಜಲು ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ನಝೀರ್(25) ಹಾಗೂ ಗೋಳ್ತಮಜಲು ಗ್ರಾಮದ ಕೆ.ಸಿ.ರೋಡು ನಿವಾಸಿ ಮಹಮ್ಮದ್ ಇಕ್ಬಾಲ್ (26) ಎಂದು ಗುರುತಿಸಲಾಗಿದೆ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ಹೊರವಲಯದ ಮುಕ್ರಂಪಾಡಿ ಎಂಬಲ್ಲಿ ರಿಡ್ಝ್ ಕಾರಿನಲ್ಲಿ ಅಕ್ರಮವಾಗಿ ನಗದು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಪೊಲೀಸರು ಆರೋಪಿಗಳಿಂದ ಹೊಸ 2000ರೂ. ಮುಖಬೆಲೆಯ 16.80 ಲಕ್ಷ, 100ರೂ. ಮುಖಬೆಲೆಯ 1,90,700 ಲಕ್ಷ ಹಾಗೂ 50ರೂ. ಮುಖಬೆಲೆಯ 9,300ರೂ. ಸೇರಿ ಒಟ್ಟು 18.80 ಲಕ್ಷ ರೂ. ನಗದು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಭೂಷಣ್ ಗುಲಾಬ್ ರಾವ್ ಬೋರಸೆ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲಿಸ್ ಅಧೀಕ್ಷಕ ಡಾ. ವೇದಮೂರ್ತಿ ಅವರ ಮಾರ್ಗದರ್ಶನದಲ್ಲಿ ಪುತ್ತೂರು ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ ಅವರ ಅದೇಶದಂತೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಸಂಪ್ಯ ಠಾಣಾ ಎಸ್‌ಐ ಅಬ್ದುಲ್ ಖಾದರ್, ಸಿಬ್ಬಂದಿಗಳಾದ ಚಂದ್ರ ಹೆಚ್. ಸಿ, ವಿನಯ ಕುಮಾರ್, ರವೂಫ್, ನಗರ ಠಾಣೆಯ ಸಿಬ್ಬಂದಿಗಳಾದ ಸ್ಕರಿಯಾ ಹೆಚ್.ಸಿ, ಪ್ರಶಾಂತ್ ರೈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.