ಕರಾವಳಿ

ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿ ತಿರಸ್ಕೃತ

Pinterest LinkedIn Tumblr

ಉಡುಪಿ: ಉಡುಪಿಯ ಬಹುಕೋಟಿ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಜು.28 ರಂದು ಭಾಸ್ಕರ್ ಶೆಟ್ಟಿ ಕೊಲೆ ನಡೆದಿತ್ತು.

bhaskar-shetty

(ಕೊಲೆಯಾದ ಭಾಸ್ಕರ್ ಶೆಟ್ಟಿ)

Bhaskar Shetty_Murder Case_Cloth

(ಕೊಲೆ ಆರೋಪಿ ರಾಜೇಶ್ವರಿ ಹಾಗೂ ಆಕೆ ಪ್ರಿಯಕರ ನಿರಂಜನ ಭಟ್ಟ)

ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿ ಆದೇಶ ನೀಡಿದೆ.ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶ ಟಿ. ವೆಂಕಟೇಶ್ ನಾಯ್ಕ್ ಅವರು, ಜಾಮೀನು ಅರ್ಜಿ ಸಲ್ಲಿಸಿದವರು ಮಹಿಳೆಯಾಗಿದ್ದರೂ ಕೂಡ ಇದೊಂದು ಗಂಭೀರ ಪ್ರಕರಣವಾದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯ ಹಾಗೂ ಕುಟುಂಬಿಕ ವ್ಯವಸ್ಥೆಗೆ ಮಾರಕವಾದ ಇಂತಹ ಘಟನೆಗಳು ನಡೆಯಬಾರದು. ಯಾವುದೇ ನಿರ್ದಿಷ್ಟ ಕಾರಣವಿಲ್ಲದೇ ಗಂಡನನ್ನು ಕೊಲೆಗೈದ ಕಾರಣ ಜಾಮೀನು ನೀಡುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ವಕೀಲ ಶಾಂತಾರಾಮ ಶೆಟ್ಟಿ ವಾದ ಮಂಡಿಸಿದ್ದರು.

Comments are closed.