ಕರಾವಳಿ

ನಳಿನ್ ಕುಮಾರ್ ಬೆಂಕಿ ಹಚ್ಚಿದರೆ ಬೆಂಕಿ ಶಮನ ಮಾಡುವ ಶಕ್ತಿ ಸರಕಾರಕ್ಕಿದೆ : ಸಚಿವ ರಮಾನಾಥ ರೈ ತಿರುಗೇಟು

Pinterest LinkedIn Tumblr

rai_press_meet_1

ಮಂಗಳೂರು, ಡಿಸೆಂಬರ್.2: ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲೆಗೆ ಬೆಂಕಿ ಹಚ್ಚಿದರೆ ಅದನ್ನು ಶಮನ ಮಾಡುವ ಶಕ್ತಿ ಸರಕಾರಕ್ಕಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ತಿರುಗೇಟು ನೀಡಿದ್ದಾರೆ.

ಕೊಣಾಜೆಯಲ್ಲಿ ಇತ್ತೀಚೆಗೆ ನಡೆದ ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳ ಒಳಗೆ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಾಕಲು ನಮಗೂ ಗೊತ್ತಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಪ್ರತಿಭಟನಾ ಭಾಷಣದಲ್ಲಿ ಹೇಳಿರುವ ಹೇಳಿಕೆಯ ವಿರುದ್ಧ ನಗರದಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜವಾಬ್ದಾರಿಯುತ ಲೋಕಸಭಾ ಸದಸ್ಯ ಸಾಮರಸ್ಯ ಕಾಪಾಡಬೇಕು. ಚುನಾಯಿತ ಪ್ರತಿನಿಧಿಯಾಗಿ ಈ ರೀತಿಯ ಹೇಳಿಕೆ ಸಲ್ಲದು. ಈ ಬಗ್ಗೆ ಗೃಹ ಸಚಿವರಲ್ಲಿ ಸಂಪರ್ಕದಲ್ಲಿದ್ದು, ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

rai_press_meet_2

rai_press_meet_3

ಪೊಲೀಸ್ ಠಾಣೆ ಮುಂದೆ ನಡೆದ ಪ್ರತಿಭಟನೆ ಕಾನೂನು ವ್ಯವಸ್ಥೆ ಗೆ ಗಂಭೀರ ಸವಾಲಾಗಿದೆ. ಕಾರ್ತಿಕ್ ರಾಜ್ ಕೊಲೆ ಪ್ರಕರಣ ಸಿಒಡಿ ತನಿಖೆಗೆ ವಹಿಸಲು ಸಿಎಂ ಜೊತೆ ಮಾತನಾಡುತ್ತೇನೆ. ದುಷ್ಟ ಶಕ್ತಿಗಳ ಈ ಕೃತ್ಯವನ್ನು ಖಂಡಿಸುವುದಾಗಿ ಅವರು ಹೇಳಿದರು.

rai_press_meet_4

ಆರೋಪಿಗಳನ್ನು 10 ದಿನಗಳ ಒಳಗೆ ಬಂಧಿಸದಿದ್ದರೆ…

ಇತ್ತೀಚೆಗೆ ನಡೆದ ಪಜೀರ್‌‌ನ ಕಾರ್ತಿಕ್‌ರಾಜ್ ಹತ್ಯೆ ಆರೋಪಿಗಳ ಪತ್ತೆಗೆ ಆಗ್ರಹಿಸಿ ಕೊಣಾಜೆ ಪೊಲೀಸ್ ಠಾಣೆಯ ಮುಂಭಾಗದಲ್ಲೇ ನಡೆದ ಪ್ರತಿಭಟನಾ ಧರಣಿ ಉದ್ದೇಶಿಸಿ ಭಾವಧ್ವೇಗದಿಂದ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳ ಒಳಗೆ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಾಕಲು ನಮಗೂ ಗೊತ್ತಿದೆ. ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ತಿಕ್‌ರಾಜ್ ಹತ್ಯೆ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಹಲವು ದುಷ್ಕೃತ್ಯಗಳು ನಡೆಯುತ್ತಿವೆ. ಆದರೆ ಈ ಪ್ರಕರಣಗಳಿಗೆ ಸಂಬಂಧಿಸಿ ಅಪರಾಧಿಗಳನ್ನು ಬಂಧಿಸುವಲ್ಲಿ ಪೊಲೀಸರು ಹಾಗೂ ಸರ್ಕಾರ ವಿಫಲವಾಗಿದೆ. ಈ ಎಲ್ಲಾ ಕ್ರಿಮಿನಲ್ ಚಟುವಟಿಕೆಗಳಿಗೆ ಈ ಭಾಗದ ಶಾಸಕರೇ ನೇರ ಹೊಣೆ ಎಂದು ಆರೋಪಿಸಿದ್ದರು.

Comments are closed.