ಕರಾವಳಿ

ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

Pinterest LinkedIn Tumblr

congres_protest_1

ಮಂಗಳೂರು,ಜನವರಿ.2: ಜಿಲ್ಲೆಗೆ ಬೆಂಕಿ ಹಚ್ಚುತ್ತೇನೆ ಎನ್ನುವ ಮೂಲಕ ಇಲ್ಲಿನ ಸಂಸದರು ಜಿಲ್ಲೆಯ ಕೋಮು ಸೌರ್ಹಾದತೆಗೆ ಹಾನಿಯುಂಟು ಮಾಡುವ ಹೇಳಿಕೆ ನೀಡಿದ್ದಾರೆ. ಇದರ ವಿರುದ್ಧ ಸೂಕ್ತ ಕ್ರಮಕ್ಕಾಗಿ ಯುವ ಕಾಂಗ್ರೆಸ್ ಕಾನೂನು ಹೋರಾಟ ನಡೆಸಲಿದೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥನ್ ರೈ ಹೇಳಿದರು.

congres_protest_2

ಕೊಣಾಜೆಯಲ್ಲಿ ಇತ್ತೀಚೆಗೆ ನಡೆದ ಕಾರ್ತಿಕ್‌ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಸದ ನಳಿನ್ ಕುಮಾರ್ ಕಟೇಲ್ ಅವರು ಬಾನುವಾರ ಕೊಣಾಜೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈ ಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

congres_protest_3

ಒಂದು ಕಡೆ ನೇತ್ರಾವತಿ ನದಿ ತಿರುವು ವಿಚಾರದಲ್ಲಿ ಜಿಲ್ಲೆಯ ಜನತೆಗಾಗಿ ಹೋರಾಟ ನಡೆಸುವುದಾಗಿ ಹೇಳುವ ನಳಿನ್ ಕುಮಾರ್ ಇನ್ನೊಂದು ಕಡೆ ಬೆಂಕಿ ಹಚ್ಚುವ ಮಾತನಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ ಮಿಥುನ್ ರೈ, ಬಿಜೆಪಿ ಈ ರೀತಿ ಬೆಂಕಿ ಹಚ್ಚುವ ಕೆಲಸಕ್ಕಿಳಿದರೆ ಕಾಂಗ್ರೆಸ್ ಅದನ್ನು ಶಮನ ಮಾಡಲು ಸಿದ್ಧವಿದೆ. ಕೊಣಾಜೆಯ ಕಾರ್ತಿಕ್ ರಾಜ ಅಮಾಯಕ. ಆತನ ಕೊಲೆ ಪ್ರಕರಣದ ಬಗ್ಗೆ ನಿಷ್ಪಕ್ಷವಾದ ತನಿಖೆಯಾಗಬೇಕೆನ್ನುವುದು ನಮ್ಮ ಆಗ್ರಹವಾಗಿದೆ. ಈ ಬಗ್ಗೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಪ್ರತಿಭಟನಾ ಸಭೆಯನ್ನುದ್ದೇಶಿಸಿಸಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು,ಮನಪಾ ಸದಸ್ಯ ಪ್ರವೀಣ್ ಚಂದ್ರ ಆಳ್ವಾ ಸಭೆಯನ್ನುದ್ದೇಶಿಸಿ ಮಾತನಾಡಿದರು.ಯುವ ಕಾಂಗ್ರೆಸ್‌ನ ಪಧಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.