ಕರಾವಳಿ

ಪೊಲೀಸ್ ಅಯುಕ್ತರಿಂದ ಸಂಸದ ನಳಿನ್ ಕುಮಾರ್ ವಿವಾದಾತ್ಮಕ ಹೇಳಿಕೆ ವಿರುದ್ಧ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಕೆ

Pinterest LinkedIn Tumblr

 

nalin_kumar_police

ಮಂಗಳೂರು, ಜ.3 : ಸಂಸದ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಭಾಷಣ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಈಗಾಗಲೇ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದ್ದು, ನ್ಯಾಯಾಲಯದ ನಿರ್ದೇಶನಕ್ಕಾಗಿ ಕಾಯುತ್ತಿರುವುದಾಗಿ ಮಂಗಳೂರು ನಗರ ಪೊಲೀಸ್ ಅಯುಕ್ತ ಎಂ. ಚಂದ್ರಶೇಖರ್ ಹೇಳಿದ್ದಾರೆ.

ಈ ಪ್ರಕರಣದ ಬಗ್ಗೆ ಈಗಾಗಲೇ ದೂರು ದಾಖಲಾಗಿದ್ದು , ಐಪಿಸಿ ಸೆಕ್ಷನ್ 506 ರಡಿ ಪ್ರಕರಣ ದಾಖಲಿಸಲಾಗಿದೆ.ನ್ಯಾಯಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವೂದೇ ರಾಜಕೀಯ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಕಮೀಷನರ್ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ತ್ವರಿತ ತನಿಖೆಗೆ ಆಗ್ರಹಿಸಿ ಬಾನುವಾರ ಕೊಣಾಜೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳೊಳಗೆ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಾಕಲು ನಮಗೂ ಗೊತ್ತಿದೆ ಎಂಬ ರೀತಿಯಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು ಎನ್ನಲಾಗಿದ್ದು, ಈ ಹೇಳಿಕೆ ವಿರುದ್ಧ ವ್ಯಾಪಾಕ ಪ್ರತಿಭಟನೆಗಳು, ದೂರುಗಳು, ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಳಿಕ ಸಂಸದರು ತನ್ನ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿ ಸ್ಪಷ್ಟಣೆ ನೀಡಿದ್ದರು.

Comments are closed.