ಮಂಗಳೂರು, ಜನವರಿ.4: ಮಂಗಳೂರಿನ ಸರಕಾರಿ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸಿದ ಆರೋಪದಲ್ಲಿ ಎಸಿಬಿ ಬಲೆಗೆ ಬಿದಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂಸ್ವಾಧೀನಾಧಿಕಾರಿ ಗಾಯತ್ರಿ ಎನ್. ನಾಯಕ್ ಅವರನ್ನು ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಬುಧವಾರ ಅಪರಾಹ್ನ ನಗರದ ಮಿನಿ ವಿಧಾನ ಸೌಧದ ಬಳಿಯ ವಿಶೇಷ ಭೂಸ್ವಾಧೀನಾಧಿಕಾರಿಯ ಕಚೇರಿಗೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಗಾಯತ್ರಿ ನಾಯಕ್ ಅವರನ್ನು ವಶಕ್ಕೆ ತೆಗೆದುಕೊಂಡರು. ಕಾಸರಗೋಡಿನ ಯೋಗೀಶ್ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.
ರಾ.ಹೆ. 169 (ಕಾರ್ಕಳ-ಮೂಡುಬಿದಿರೆ)ರ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಗಾಯತ್ರಿ ನಾಯಕ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರುದಾರ ಯೋಗೀಶ್ ಎಂಬವರಿಂದ ಸುಮಾರು 1.30 ಲಕ್ಷ ರೂ. ಲಂಚ ಸ್ವೀಕರಿಸಿದ್ದರು ಎನ್ನಲಾಗಿದೆ.
ಅಲ್ಲದೆ ಸುಮಾರು 16 ಲಕ್ಷ ರೂ. ಲಂಚದ ಬೇಡಿಕೆ ಮುಂದಿಟ್ಟಿದ್ದು, ಆ ಹಿನ್ನೆಲೆಯಲ್ಲಿ ಯೋಗೀಶ್ ಎಸಿಬಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಯೋಗೀಶ್ ರಿಂದ 20 ಸಾವಿರ ರೂ. ಸ್ವೀಕರಿಸುವಾಗಲೇ ದಾಳಿ ಮಾಡಿ ಗಾಯತ್ರಿಯವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Comments are closed.