ಕರಾವಳಿ

ಎಸಿಬಿಯಿಂದ ಬಂಧನಕ್ಕೊಳಗಾಗಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಮಂಗಳೂರು, ಜ. 6: ಎರಡು ದಿನಗಳ ಹಿಂದೆ ಲಂಚ ಸ್ವೀಕಾರದ ಆರೋಪದಲ್ಲಿ ಎಸಿಬಿಯಿಂದ ಬಂಧನಕ್ಕೊಳಗಾಗಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಗಾಯತ್ರಿ ಎನ್.ನಾಯಕ್ ಅವರು ಅಸೌಖ್ಯ ಕಾರಣ ಒಡ್ಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯತ್ರಿ ಎನ್.ನಾಯಕ್ ಅವರು ಲಂಚ ಸ್ವೀಕಾರ ಮಾಡುವ ಸಂದರ್ಭದಲ್ಲಿ ರೆಡ್ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ)ದ ಬಲೆಗೆ ಬಿದ್ದಿದ್ದರು.

ಕಾಸರಗೋಡಿನ ಯೋಗೀಶ್ ಎಂಬವರು ನೀಡಿದ ದೂರಿನಂತೆ ಎಸಿಬಿ ಅಧಿಕಾರಿಗಳು ಬುಧವಾರ ನಗರದ ಮಿನಿ ವಿಧಾನ ಸೌಧದ ಬಳಿಯ ವಿಶೇಷ ಭೂಸ್ವಾಧೀನಾಧಿಕಾರಿಯ ಕಚೇರಿಗೆ ದಾಳಿ ಮಾಡಿ ಗಾಯತ್ರಿ ನಾಯಕ್ ಮತ್ತು ಕಚೇರಿ ಸಹಾಯಕ ತುಕ್ರಪ್ಪನನ್ನು ಬಂಧಿಸಿದ್ದರು.

ಭೂಸ್ವಾಧೀನಕ್ಕೆ ಸಂಬಂಧಿಸಿ ಪರಿಹಾರ ಮೊತ್ತ ವಿತರಣೆಗಾಗಿ 25 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಗಾಯತ್ರಿ ನಾಯಕ್ ಹಾಗೂ ತುಕ್ರಪ್ಪ ಎಸಿಬಿ ಬಲೆಗೆ ಬಿದ್ದಿದ್ದರು. ಗಾಯತ್ರಿ ನಾಯಕ್ ಹಾಗೂ ಕಚೇರಿ ಸಹಾಯಕ ತುಕ್ರಪ್ಪನನ್ನು ಬುಧವಾರ ಸಾಯಂಕಾಲ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Click Here : ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಗೆ ಎಸಿಬಿ ದಾಳಿ : ಲಂಚ ಸ್ವೀಕರಿಸಿದ ಅಧಿಕಾರಿಯ ಬಂಧನ

Comments are closed.