ಕರಾವಳಿ

ಸಂಸದ ಆನಂತಕುಮಾರ್ ವಿರುದ್ಧ ಕಾನೂನು ಕ್ರಮಕೈ ವೈದ್ಯರ ಆಗ್ರಹ

Pinterest LinkedIn Tumblr

ಮಂಗಳೂರು, ಜನವರಿ.7: ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮಂಗಳೂರು ಇದರ ವತಿಯಿಂದ ಉತ್ತರ ಕನ್ನಡ ಸಂಸದ ಅನಂತಕುಮಾರ್ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಕರ್ತವ್ಯ ನಿರತ ಶಿರಸಿಯ ಟಿಎಸ್‌ಎಸ್ ಆಸ್ಪತ್ರೆಯ ವೈದ್ಯ ಹಾಗೂ ಸಿಬ್ಬಂದಿಯ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಅನಂತಕುಮಾರ್ ಅವರ ಕೃತ್ಯವನ್ನು ಖಂಡಿಸಿ,ಹಲ್ಲೆ ಆರೋಪಿ ಸಂಸದರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಕಾರ ವೈದ್ಯರು ಆಗ್ರಹಿಸಿದರು.

ಅಸೋಸಿಯೇಶನ್ ಅಧ್ಯಕ್ಷ ಡಾ.ರಾಘವೇಂದ್ರ ಭಟ್, ಮುಖಂಡರಾದ ಡಾ.ಶಾಂತರಾಮ ಶೆಟ್ಟಿ, ಡಾ.ಅಣ್ಣಯ್ಯ ಕುಲಾಲ್, ಡಾ.ಕೆ.ಆರ್.ಕಾಮತ್, ಡಾ.ದಿವಾಕರ್, ಡಾ.ಪ್ರಕಾಶ್ಚಂದ್ರ ಮತ್ತಿತತರರು ಪಾಲ್ಗೊಂಡಿದ್ದರು.

ಪ್ರತಿಭಟನೆಗು ಮುನ್ನ ಅತ್ತಾವರ ಐಎಂಎ ಹಾಲ್ ನಿಂದ ದ.ಕ. ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪ್ರತಿಭಟನಾ ಜಾಥ ನಡೆಯಿತು.

Comments are closed.