ಕರಾವಳಿ

ನೋಟು ಅಪಮೌಲ್ಯ ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌‌ನಿಂದ ಪ್ರತಿಭಟನೆ

Pinterest LinkedIn Tumblr

ಮಂಗಳೂರು, ಜನವರಿ.7: ನೋಟು ಅಪಮೌಲ್ಯಗೊಳಿಸಿರುವುದನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಶನಿವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಯನ್ನುದ್ದೇಶಿಸಿ ಎಐಸಿಸಿ ವೀಕ್ಷಕ ವಿಷ್ಣುಪ್ರಸಾದ್ ಮಾತನಾಡಿ, ಪ್ರಧಾನಿ ಮೋದಿಯವರು ದೇಶದ ಜನತೆ, ಮಿತ್ರಪಕ್ಷಗಳು, ಪ್ರತಿಪಕ್ಷಗಳು ಮತ್ತು ಆರ್ಬಿಐ ಗವರ್ನರ್ ಜತೆ ಯಾವುದೇ ಸಮಾಲೋಚನೆ ನಡೆಸದೇ ಏಕಾಏಕಿ ನೋಟು ಅಮಾನ್ಯಗೊಳಿಸಿರುವ ಕ್ರಮ ಅಸಾಂವಿಧಾನಿಕ. ಮೋದಿ ನೇತೃತ್ವದ ಕೇಂದ್ರ ಸರಕಾರವು ನೋಟು ಅಪವೌಲ್ಯಗೊಳಿಸುರುವುದನ್ನು ಖಂಡಿಸುವುದಾಗಿ ತಿಳಿಸಿದರು.

ಸಚಿವ ಯು.ಟಿ.ಖಾದರ್, ಶಾಸಕರಾದ ಜೆ.ಆರ್.ಲೋಬೊ, ಅಭಯಚಂದ್ರ ಜೈನ್, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಮೇಯರ್ ಹರಿನಾಥ್, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಶಾಸಕಿ ಶಕುಂತಳಾ ಶೆಟ್ಟಿ, ರಾಜ್ಯ ಗೇರು ಅಭಿವೃದ್ಧಿ ನಿಗದ ಅಧ್ಯಕ್ಷ ಬಿ.ಎಚ್.ಖಾದರ್, ಡಿಸಿಸಿ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಜಿಪಂ ಸದಸ್ಯೆ ಮಮತಾ ಗಟ್ಟಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Comments are closed.