ಕರಾವಳಿ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನೀಯ : ಜಿಲ್ಲಾಧಿಕಾರಿ

Pinterest LinkedIn Tumblr

ಮಂಗಳೂರು, ಜನವರಿ. 10 : ಇಡೀ ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಪೊಲೀಸರು ತಮ್ಮ ಕರ್ತವ್ಯವನ್ನು ಕಟ್ಟು ನಿಟ್ಟಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅದ್ಬುತ ಕೆಲಸ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಶ್ರಮಿಸುತ್ತದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದರು.

ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ವಾರ್ಷಿಕ ಪೊಲೀಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಪೊಲೀಸ್ ಕೆಲಸದಲ್ಲಿ ದೈಹಿಕ ಹಾಗು ಮಾನಸಿಕ ಒತ್ತಡ ಯಾವಾಗಲೂ ಇರುತ್ತದೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ನಾವು ಭೌತಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು.ಸದೃಢರಾಗಬೇಕಾದರೆ ವ್ಯಾಯಾಮ ಅತ್ಯಗತ್ಯ. ಕ್ರೀಡೆ ಕೇವಲ ಸ್ಪರ್ಧೆಗಳಿಗೆ ಸೀಮಿತವಲ್ಲ ಬದಲಿಗೆ ನಮ್ಮ ದೈನಂದಿನ ಜೀವದಲ್ಲಿ ಕೂಡಾ ಕ್ರೀಡೆಗಳು ಅಗತ್ಯವಾಗಿದೆ ಎಂದು ಹೇಳಿದರು.

Comments are closed.