ಕರಾವಳಿ

ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ – ಎಸ್ಪಿ-ಐಜಿ ನೇತೃತ್ವದಲ್ಲಿ ತನಿಖೆ :ಡಾ.ಜಿ. ಪರಮೇಶ್ವರ್

Pinterest LinkedIn Tumblr

ಮಂಗಳೂರು, ಜನವರಿ 13 : ಶೃಂಗೇರಿಯಲ್ಲಿ ಇತ್ತೀಚಿಗೆ ಆತ್ಮಹತ್ಯೆಗೈದ ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಪ್ರಕರಣದ ತನಿಖೆಯನ್ನು ಎಸ್ಪಿ, ಐಜಿ ನೇತೃತ್ವದಲ್ಲಿ ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಎಬಿವಿಪಿ ಮತ್ತು ಎನ್‌ಎಸ್ ಯು ಐ ಕಾರ್ಯಕರ್ತರ ನಡುವೆ ಗಲಾಟೆ ವಿಚಾರವಾಗಿ ತನ್ನ ಮೇಲೆ ಪ್ರಕರಣ ದಾಖಲಾಗಿದ್ದಕ್ಕೆ ಮನನೊಂದು ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ.

ಗುರುವಾರ ಮಂಗಳೂರಿಗೆ ಆಗಮಿಸಿದ ಸಚಿವರಲ್ಲಿ ಈ ಬಗ್ಗೆ ಸುದ್ಧಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶೃಂಗೇರಿಯಲ್ಲಿ ನಡೆದ ಎಬಿವಿಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣವನ್ನು ಎಸ್ಪಿ ಮತ್ತು ಐಜಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ. ಬಳಿಕ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

Comments are closed.