ಕರಾವಳಿ

ಕದ್ರಿ ಶ್ರೀ ಕ್ಷೇತ್ರದ ದ್ವಾರದಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನವರೆಗಿನ ಕಾಂಕ್ರಿಟ್ ರಸ್ತೆ ಉದ್ಘಾಟನೆ

Pinterest LinkedIn Tumblr

ಮಂಗಳೂರು, ಜನವರಿ.15: ನಗರದ ಕದ್ರಿ ದ್ವಾರದಿಂದ ಕದ್ರಿ ಮಂಜುನಾಥ ದೇವಸ್ಥಾನವರೆಗಿನ 850 ಮೀ. ಉದ್ದದ ಕಾಂಕ್ರಿಟ್ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹಾಗೂ ಮಾಜಿ ಮುಖ್ಯಮಂತ್ರಿ ಉದ್ಘಾಟಿಸಿದರು.

ಬಳಿಕ ಉದ್ಘಾಟನಾ ಸಭಾ ಕಾರ್ಯಕ್ರಮವು ನಗರದ ಕದ್ರಿ ದೇವಸ್ಥಾನದ ವಠಾರದಲ್ಲಿ ಜರಗಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಡಾ.ಎಂ.ವೀರಪ್ಪ ಮೊಯ್ಲಿಯವರು ಅಭಿವೃದ್ಧಿಯ ವಿಚಾರದಲ್ಲಿ ಯಾರು ಕೂಡ ನಿರ್ಲಕ್ಷ ಮಾಡಬಾರದು ಎಂದು ಹೇಳಿದರು.

ಶಾಸಕ ಜೆ. ಆರ್. ಲೋಬೊ ಮಾತನಾಡಿ, ಕದ್ರಿಯಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಸ್ಮಶಾನ ಅಭಿವೃದ್ಧಿಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಇದರೊಂದಿಗೆ ಭೂಗತ ವಿದ್ಯುತ್ ಕೇಬಲ್ ಅಳವಡಿಕೆ ಕಾರ್ಯವು ಮೆಸ್ಕಾಂ ಸಹಾಯದೊಂದಿಗೆ ಕೆಪಿಟಿಸಿಎಲ್ನಿಂದ ನಡೆಯಲಿದೆ ಎಂದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕದ್ರಿ ಯೋಗೀಶ್ವರ ಮಠದ ಮಠಾಧೀಶ ನಿರ್ಮಲನಾಥ್ ಸ್ವಾಮೀಜಿ, ಕದ್ರಿ ದೇವಸ್ಥಾನದ ತಂತ್ರಿ ದೇರೆಬೈಲು ವಿಠಲದಾಸ ತಂತ್ರಿ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮೇಯರ್ ಹರಿನಾಥ್, ಪಾಲಿಕೆ ಸಚೇತಕ ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಕೆ.ಅಶ್ರ್, ನಗರ ಯೋಜನೆ ಸ್ಥಾಯಿ ಸಮಿತಿಯ ಲ್ಯಾನ್ಸಿ ಲೊಟ್ ಪಿಂಟೊ, ಕಾರ್ಪೊರೇಟರ್ಗಳಾದ ಪ್ರತಿಭಾ ಕುಳಾಯಿ, ಕವಿತಾ ಸನಿಲ್, ಭಾಸ್ಕರ, ರಾಧಾಕೃಷ್ಣ, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ಕಾರ್ಪೊರೇಟರ್ ಡಿ.ಕೆ. ಅಶೋಕ್ಕುಮಾರ್, ರಸ್ತೆ ಕಾಮಗಾರಿಗೆ ಸಹಕರಿಸಿದ ಪ್ರಭಾಕರ ಯೆಯ್ಯೆಡಿ, ಲಕ್ಷ್ಮಣ ಪೂಜಾರಿ, ಯಶವಂತ್, ಪ್ರವೀಣ್ರನ್ನು ಸನ್ಮಾನಿಸಲಾಯಿತು. ಸುಧಾಕರ ರಾವ್ ಪೇಜಾವರ ಕಾರ್ಯಕ್ರಮ ನಿರೂಪಿಸಿದರು.

Comments are closed.