ಉಡುಪಿ: ಉಡುಪಿ ನೂತನ ಹೈಟೆಕ್ ಮಹಿಳಾ ಮೀನು ಮಾರುಕಟ್ಟೆಯನ್ನು ರಾಜ್ಯದ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು. ರೂ.2.60 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಹೈಟೆಕ್ ಮೀನು ಮಾರುಕಟ್ಟೆಯಲ್ಲಿ 174 ಮಂದಿ ಮಹಿಳಾ ಮೀನುಗಾರರಿಗೆ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೀನು ಮಾರುಕಟ್ಟೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವಂತೆ ಹಾಗೂ ನಿಗಧಿತ ಶುಲ್ಕವನ್ನು ನಗರಸಭೆಗೆ ಪಾವತಿಸುವಂತೆ ತಿಳಿಸಿದ ಸಚಿವರು, ಮೀನು ಮಾರುಕಟ್ಟೆ ಸಮೀಪ ಕಾಲೇಜು ಇರುವುದರಿಂದ ಮೀನಿನ ತ್ಯಾಜ್ಯವನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಿ, ಪರಿಸರದಲ್ಲಿ ನೈರ್ಮಲ್ಯ ಕಾಪಾಡುವಂತೆ ತಿಳಿಸಿದರು.

ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಕಾರವಾರ ವಿಭಾಗದ ಸೂಪರಿಟೆಂಡೆಂಟ್ ಇಂಜಿನಿಯರ್ ಜಂಭಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಜಿ.ಪಂ. ಸದಸ್ಯ ಜನಾರ್ಧನ ತೋನ್ಸೆ, ನಗರಸಭೆಯ ಉಪಾಧ್ಯಕ್ಷೆ ಸಂಧ್ಯಾ, ನಗರಸಭೆಯ ಸದಸ್ಯೆ ಗೀತಾ ರವಿ ಶೇಟ್, ತಾಲೂಕು ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಹೆಚ್.ಸಾಲ್ಯಾನ್, ಉಡುಪಿ ಮೀನುಗಾರರ ಸಂಘದ ಅಧ್ಯಕ್ಷ ಟಿ.ಹಿರಿಯಣ್ಣ ಕಿದಿಯೂರು, ನಗರಸಭೆಯ ಪೌರಾಯುಕ್ತ ಮಂಜುನಾಥಯ್ಯ, ಮೀನುಗಾರಿಕಾ ಇಲಾಖೆಯ ಇಂಜಿನಿಯರ್ ಕೆ.ಆರ್. ದಯಾನಂದ್, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಗಣಪತಿ ಭಟ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜಾ ಸ್ವಾಗತಿಸಿದರು
Comments are closed.