ಕರಾವಳಿ

ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಭಾರತಿ ಶೆಟ್ಟಿ ಕೊಲ್ಲೂರು ಭೇಟಿ

Pinterest LinkedIn Tumblr

ಕುಂದಾಪುರ: ಬಿಜೆಪಿಯ ಮಹಿಳಾ ಮೋರ್ಚಾದ ರಾಜ್ಯ ಅಧ್ಯಕ್ಷೆ ಭಾರತಿ ಶೆಟ್ಟಿ ಅವರು ಸೋಮವಾರ ಕುಂದಾಪುರ ತಾಲೂಕಿನ ಪ್ರಸಿದ್ದ ಪುಣ್ಯ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದರು.

ಸೋಮವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದೇವಿಯ ದರ್ಶನ ಪಡೆದು ವಿಶೇಶ ಪೂಜೆ ಸಲ್ಲಿಸಿ, ತುಪ್ಪದ ದೀಪದ ಸೇವೆ ಸಮರ್ಪಿಸಿದರು. ಕೊಲ್ಲೂರು ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಅವರು ಬರಮಾಡಿಕೊಂಡರು. ಈ ಸಂದರ್ಭ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಕಾರ್‍ಯಕಾರಿಣಿ ಸದಸ್ಯೆ ಶ್ಯಾಮಲಾ ಕುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೀಣಾ ಎಸ್. ಶೆಟ್ಟಿ, ರಶ್ಮೀತಾ ಬಾಲಕೃಷ್ಣ ಶೆಟ್ಟಿ, ಕುಂದಾಪುರ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರವೀಣ ಕುಮಾರ್ ಶೆಟ್ಟಿ ಕಡ್ಕೆ ಉಪಸ್ಥಿತರಿದ್ದರು.

————————————-

-ಯೋಗೀಶ್ ಕುಂಭಾಸಿ

Comments are closed.