ಕರಾವಳಿ

ಮಂಗಳೂರು ಶಾಸಕ, ಸಚಿವ ಯುಟಿ ಖಾದರ್ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ

Pinterest LinkedIn Tumblr

ಮಂಗಳೂರು, ಜನವರಿ.18: ಮಂಗಳೂರು ವಿಧಾನಸಭಾ (ಉಳ್ಳಾಲ) ಕ್ಷೇತ್ರದ ಶಾಸಕ ಹಾಗೂ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ. ಖಾದರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸಿದ್ಧರಾಮಯ್ಯರ ಆಪ್ತರಾಗಿದ್ದ ಎಚ್‌ಎಸ್ ಮಹದೇವಪ್ರಸಾದ್ ನಿಧನದಿಂದಾಗಿ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ತೆರವಾಗಿತ್ತು.

ಮುಖ್ಯಮಂತ್ರಿಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ಯು.ಟಿ. ಖಾದರ್ ಅವರನ್ನು ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ ಎಂದು ಮಂಗಳವಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Comments are closed.