ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆರಂಭಿಸಲಾಗುವ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠಕ್ಕೆ ಮುಖ್ಯಮಂತ್ರಿ ಚಾಲನೆ

Pinterest LinkedIn Tumblr

ಮಂಗಳೂರು / ಕೊಣಾಜೆ, ಜನವರಿ.19: ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವು ಸಾಮಾಜಿಕ ಚಿಂತನೆಗಳನ್ನು ಒಳಗೊಂಡಿವೆ. ಅವುಗಳನ್ನು ಯುವ ವಿದ್ಯಾರ್ಥಿ ಸಮೂಹಕ್ಕೆ ತಿಳಿಸುವ ಕೆಲಸವನ್ನು ಅಧ್ಯಯನ ಪೀಠಗಳು ಮಾಡಬೇಕಿದೆ. ಶೈಕ್ಷಣಿಕ ಸಂಸ್ಥೆಗಳು ವೈಜ್ಞಾನಿಕ ಹಾಗೂ ವೈಚಾರಿಕವಾಗಿ ಶಿಕ್ಷಣ ನೀಡಲು ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ದಕ್ಷಿಣ ಭಾರತದಲ್ಲೇ ಪ್ರಭಾವಶಾಲಿ ಸಮಾಜ ಸುಧಾರಕರಾಗಿ ಖ್ಯಾತರಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಹೆಸರಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆರಂಭಿಸಲಾಗುವ ಅಧ್ಯಯನ ಪೀಠವನ್ನು ಗುರುವಾರ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.

ಇದೇ ಸಂಧರ್ಭ ವಿವಿಯ ನೂತನ ಅಧ್ಯಯನ ಪೀಠ ಹಾಗೂ ಅನ್ವಯಿಕ ಸಸ್ಯಶಾಸ ವಿಭಾಗದ ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಶಿಷ್ಯವೇತನರಹಿತ ಸಂಶೋಧನಾ ವಿದ್ಯಾರ್ಥಿಗಳಿಗೆ ಸಂಶೋಧನಾ ಶಿಷ್ಯವೇತನ ನೀಡಿಕೆ ಯೋಜನೆ ಇದೇ ವೇಳೆ ಉದ್ಘಾಟನೆಗೊಂಡಿತು.ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಹೊಸದಾಗಿ ಆಯೋಜಿಸಿರುವ ಅಂತಾರಾಷ್ಟ್ರೀಯ ಮಟ್ಟದ ಮಾಡ್ಯುಲರ್ ಪ್ರಯೋಗಾಲಯಗಳನ್ನು ಉದ್ಘಾಟಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು 2016-17ನೆ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ದಾಖಲೆ ನಿರ್ಮಿಸಿರುವ ಮಂಗಳೂರು ವಿಶ್ವವಿದ್ಯಾನಿಲಯದ ಸಾಧಕ ಕ್ರೀಡಾಪಟುಗಳನ್ನು ಸನ್ಮಾನಿಸಿದರು.ಮಾಜಿ ಸಚಿವ, ಶಾಸಕ ವಿನಯಕುಮಾರ್ ಸೊರಕೆ ಅಧ್ಯಯನ ಪೀಠದ ಬ್ರಹ್ಮಶ್ರೀ ನಾರಾಯಣಗುರು ಕುರಿತ ಪುಸ್ತಕವನ್ನು ಬಿಡುಗಡೆ ಮಾಡಿದರು.

ವಿಶ್ವವಿದ್ಯಾನಿಲಯದ ಪ್ರಸಾರಾಂಗದ ರಜತ ಮಹೋತ್ಸವದ ಅಂಗವಾಗಿ ಪ್ರಸಾರಾಂಗದ ಗ್ರಂಥ ಸರಣಿಯ 19 ವಿಭಿನ್ನ ಪುಸ್ತಕಗಳನ್ನು ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಲೋಕಾರ್ಪಣೆಗೊಳಿಸಿದರು.
ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪಕಾಯರ್ಕ್ರಮದ ಅಧ್ಯಕ್ಷತೆ ವಹಿಸಿದ್ದರು.

Comments are closed.