ಕರಾವಳಿ

ಮಂಗಳೂರಿನಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರಿಪತಾಕೆ ಪ್ರದರ್ಶನ

Pinterest LinkedIn Tumblr

ಮಂಗಳೂರು, ಜನವರಿ,19 : ಕೇರಳದಲ್ಲಿ ಆಡಳಿತರೂಢ ಎಡಪಕ್ಷದ ಕಾರ್ಯಕರ್ತರು ಸಂಘ ಪರಿವಾರದ ಕಾರ್ಯಕರ್ತರನ್ನು ಕೊಲೆಗೈಯುತ್ತಿರುವುದನ್ನು ಖಂಡಿಸಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮಂಗಳೂರಿನಲ್ಲಿ ಕರಿಬಾವುಟ ಪ್ರದರ್ಶಿಸಲಾಯಿತು.

ಮಂಗಳೂರಿನಿಂದ ತಿರುವನಂತಪುರಕ್ಕೆ ಪ್ರಯಾಣಿಸಲು ಗುರುವಾರ ಸಂಜೆ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರಿಪತಾಕೆ ತೋರಿಸಿ ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ವೇದವ್ಯಾಸ ಕಾಮತ್ ಅವರು ಕೇರಳದಲ್ಲಿ ಅಮಾಯಕ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ಹತ್ಯೆಯಾಗುತ್ತಿದೆ, ಅದಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೌನ ಸಮ್ಮತಿ ಸೂಚಿಸುತ್ತಿದ್ದಾರೆ ಎಂದು ಆಪಾದಿಸಿದರು.

ಭಾರತೀಯ ಜನತಾ ಪಾರ್ಟಿ ಸಹಿತ ಸಂಘ ಪರಿವಾರದ ಕಾರ್ಯಕರ್ತರ ಕೊಲೆ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಮತ್ತು ಅಮಾಯಕ ಸಂಘ ಪರಿವಾರದ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿತೇಂದ್ರ ಕೊಠಾರಿ, ಹರೀಶ್ ಪೂಂಜಾ, ಸಂದೀಪ್ ಶೆಟ್ಟಿ, ನಂದನ್ ಮಲ್ಯ, ಭಾಸ್ಕರ್ ಚಂದ್ರ ಶೆಟ್ಟಿ, ಹರೀಶ್ ಮೂಡುಶೆಡ್ಡೆ, ಗುರುಚರಣ್, ಗಿರೀಶ್ ಕುಮಾರ್, ರಮೇಶ್ ಹೆಗ್ಡೆ, ಅಭಿಲಾಷ್ ಶೆಟ್ಟಿ ಕಟೀಲ್, ರಕ್ಷಿತ್ ಕೊಠಾರಿ, ಮನಪಾ ಸದಸ್ಯ ದಿವಾಕರ್, ಸಂದೀಪ್ ಗರೋಡಿ, ಶಿವಾಜಿ ರಾವ್, ಕಿರಣ ಸಾಲಿಯಾನ್, ಗುರುಪ್ರಸಾದ್ ಕಾಮತ್ ಸಹಿತ ಐವತ್ತಕ್ಕೂ ಹೆಚ್ಚು ಬಿಜೆಪಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

Comments are closed.